ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಸಂಸದ ರಮೇಶ ಜಿಗಜಿಣಗಿ ಕ್ಷಮೆಯಾಚಿಸಲು ಒತ್ತಾಯ

Published 4 ಏಪ್ರಿಲ್ 2024, 14:20 IST
Last Updated 4 ಏಪ್ರಿಲ್ 2024, 14:20 IST
ಅಕ್ಷರ ಗಾತ್ರ

ಕಲಬುರಗಿ: ‘ವಿಜಯಪುರದ ಸಂಸದ, ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಬಂಜಾರ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಕೂಡಲೇ ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸಬೇಕು’ ಎಂದು ಗೋರ ಸೇನಾ ರಾಜ್ಯ ಸಮಿತಿ ಜಿಲ್ಲಾ ಅಧ್ಯಕ್ಷ ಮಾನಸಿಂಗ್ ಆರ್. ಚವ್ಹಾಣ್ ಒತ್ತಾಯಿಸಿದರು.

‘ಬಂಜಾರ ಸಮಾಜದ ಮುಖಂಡ ಬಾಬು ರಾಜೇಂದ್ರ ನಾಯಕ ಅವರಿಗೆ ಬಿಜೆಪಿ ಟಿಕೆಟ್‌ ನೀಡುವಂತೆ ಆಗ್ರಹಿಸಿ ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು. ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸುವಾಗ ಜಿಗಜಿಣಗಿ ಅವರು ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಸಂಘಟನಾ ಕಾರ್ಯದರ್ಶಿ ಶ್ರೀಧರ ಚವ್ಹಾಣ್ ಮಾತನಾಡಿ, ‘ಜಿಗಜಿಣಗಿ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಬಂಜಾರ ಸಮಾಜದ ಜನರಲ್ಲಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂಬರುವ ಚುನಾವಣೆಯಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘನೆಯ ಪದಾಧಿಕಾರಿಗಳಾದ ಯಮರಾಜ, ಪ್ರಭಾಕರ ರಾಠೋಡ, ಗುಂಡು ಚವ್ಹಾಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT