ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ATMನಲ್ಲಿ ಕಾಣದ ಕನ್ನಡ: ಬ್ಯಾಂಕ್ ಅಧಿಕಾರಿ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು

Published 28 ಆಗಸ್ಟ್ 2024, 6:12 IST
Last Updated 28 ಆಗಸ್ಟ್ 2024, 6:12 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ಶರಣಬಸವೇಶ್ವರ ದೇವಸ್ಥಾನದ ದ್ವಾರದ ಸಮೀಪದಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಗುಜರಾತಿ, ಹಿಂದಿ, ಇಂಗ್ಲಿಷ್‌ನಲ್ಲಿ ವ್ಯವಹಾರ ಮಾಡುವುದು ಅನಿವಾರ್ಯವಾಗಿದ್ದು, ಕನ್ನಡಕ್ಕೆ ಸ್ಥಾನವಿಲ್ಲ. ಹೀಗಾಗಿ, ಇದಕ್ಕೆ ಕಾರಣವಾದ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಶಿಫಾರಸು ಮಾಡಿದ್ದಾರೆ.

ಕಲಬುರಗಿಯ ಉಪನ್ಯಾಸಕ ಆನಂದ ಸಿದ್ದಾಮಣಿ ಅವರು ಎಟಿಎಂನಲ್ಲಿ ಕನ್ನಡ ಅಕ್ಷರಗಳು ಇಲ್ಲದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು.

ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಧಿಕಾರ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದೆ. ಜೊತೆಗೆ ಆಡಳಿತ ಭಾಷೆಯೂ ಹೌದು. ಆದರೆ, ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕನ್ನಡ ಭಾಷೆಯೇ ಇಲ್ಲದಿರುವುದು ಗಂಭೀರ ಲೋಪ. ಇದಕ್ಕೆ ಕಾರಣರಾದ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಪತ್ರದಲ್ಲಿ ಶಿಫಾರಸು ಮಾಡಿದ್ದಾರೆ.

ಅಲ್ಲದೇ, ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರ ಬ್ಯಾನರ್‌ ಸಂಪೂರ್ಣ ಇಂಗ್ಲಿಷ್‌ಮಯವಾಗಿದ್ದು, ರಾಜ್ಯದ ನೆಲ, ಜಲ, ಸಂಪನ್ಮೂಲಗಳನ್ನು ಬಳಸಿಕೊಂಡು ಬೆಳೆದ ಕೇಂದ್ರ ಸರ್ಕಾರದ ಅಧೀನದ ಸಂಸ್ಥೆಯು ಕನ್ನಡ ಬಳಕೆ ಮಾಡುವುದು ಕಡ್ಡಾಯ. ಆದ್ದರಿಂದ ವಿಶ್ವವಿದ್ಯಾಲಯದ ಆಹ್ವಾನ ಪತ್ರಿಕೆ, ಫಲಕ, ಪ್ರಕಟಣೆಗಳು ಕಡ್ಡಾಯವಾಗಿ ಕನ್ನಡದಲ್ಲಿರುವಂತೆ ನೋಡಿಕೊಳ್ಳಲು ಸಂಬಂಧಪಟ್ಟವರಿಗೆ ಸೂಚಿಸಬೇಕು ಎಂದು ಪುರುಷೋತ್ತಮ ಬಿಳಿಮಲೆಯವರು ಜಿಲ್ಲಾಧಿಕಾರಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಕುರಿತು ಆನಂದ ಸಿದ್ದಾಮಣಿ ಅವರು ಪ್ರಾಧಿಕಾರಕ್ಕೆ ದೂರು ನೀಡಿದ್ದರು.

ಕೇಂದ್ರ ಸರ್ಕಾರದ ತ್ರಿಭಾಷಾ ನಿಯಮದ ಅನ್ವಯ ಬ್ಯಾಂಕುಗಳ ಪ್ರಾದೇಶಿಕ ಭಾಷೆಯಾದ ಕನ್ನಡವನ್ನು ಪ್ರಥಮ ಸ್ಥಾನದಲ್ಲಿ ಅಚ್ಚುಕಟ್ಟಾಗಿ ಬಳಸಬೇಕು.
-ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಬ್ಯಾಂಕುಗಳು ಕೇಂದ್ರ ಸರ್ಕಾರದ ಅಧೀನದ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯ ಬಳಕೆ ಬಗ್ಗೆ ಅತೀವ ನಿರ್ಲಕ್ಷ್ಯ ತೋರಿಸಲಾಗುತ್ತಿದೆ. ಕನ್ನಡ ಬಳಕೆ ಕಡ್ಡಾಯವಾಗಬೇಕು.
-ಆನಂದ ಸಿದ್ದಾಮಣಿ, ಉಪನ್ಯಾಸಕ ಕಲಬುರಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT