ಸೋಮವಾರ, ಸೆಪ್ಟೆಂಬರ್ 27, 2021
22 °C

ವಾಡಿ ಪಟ್ಟಣದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹಕ್ಕೆ ತಡೆ ನೀಡಿದ ಅಧಿಕಾರಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ವಾಡಿ: ಪಟ್ಟಣದಲ್ಲಿ ಶುಕ್ರವಾರ ಅಪ್ರಾಪ್ತ ಬಾಲಕಿಯ ಮದುವೆಗೆ ಸಿದ್ಧತೆ ನಡೆದ ವೇಳೆ ದಾಳಿ ಮಾಡಿದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಚೈಲ್ಡ್ ಲೈನ್ ಸಂಘಟನೆಯವರು ಮದುವೆ ನಿಲ್ಲಿಸಿ, ಬಾಲಕಿಯನ್ನು ರಕ್ಷಿಸಿದರು.

16 ವರ್ಷದ ಬಾಲಕಿಯ ಮದುವೆ ಕಲಬುರ್ಗಿಯ 26 ವರ್ಷದ ಯುವಕನೊಂದಿಗೆ ನಿಶ್ಚಯವಾಗಿತ್ತು. ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರ ಸಹಾಯದಿಂದ ದಾಳಿ ನಡೆಸಿದ ಅಧಿಕಾರಿಗಳು ಮದುವೆ ನಿಲ್ಲಿಸಿದರು.

ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ನಾಗಮ್ಮ ಬಳ್ಳೂರಗಿ, ಚೈಲ್ಡ್‌ಲೈನ್ ಸಂಯೋಜಕ ಸುಂದರರಾಜ ಚಂದನಕೇರಾ, ಸೇರಿದಂತೆ ಸ್ಥಳೀಯ ಪೊಲೀಸರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು