ಕಲಬುರ್ಗಿ: ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವವನ್ನು ಶುಕ್ರವಾರ ಜಿಲ್ಲೆಯಾದ್ಯಂತ ಸರಳವಾಗಿ ಆಚರಿಸಲಾಯಿತು.

ನಗರದ ಜಗತ್ ವೃತ್ತದ ಬಳಿಯ ಬಸವೇಶ್ವರರ ಪುತ್ಥಳಿಗೆ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸೇರಿದಂತೆ ಹಿರಿಯ ಅಧಿಕಾರಿಗಳು ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಮಹಾ ಮಾನವತಾವಾದಿಗೆ ಗೌರವ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜ್ಯೋತ್ಸ್ನಾ, ‘ಕೋವಿಡ್ ಎರಡನೇ ಅಲೆ ಪ್ರಬಲವಾಗಿರುವ ಕಾರಣ ಜನರ ಸುರಕ್ಷತೆಯು ದೃಷ್ಟಿಯಿಂದ ಮಹಾತ್ಮರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗಿದೆ. ಅದರಂತೆ ಸಾರ್ವಜನಿಕರು ತಮ್ಮ ಮನೆಯಲ್ಲಿ ಬಸವೇಶ್ವರರನ್ನು ಪೂಜಿಸಿ ಜಯಂತಿ ಆಚರಿಸಬೇಕು. ಯಾವುದೇ ರೀತಿಯಲ್ಲಿ ಉತ್ಸವ, ಮೆರವಣಿಗೆ, ಗುಂಪುಗೂಡುವು ಆಚರಣೆ ಮಾಡಬಾರದು’ ಎಂದು ಮನವಿ ಮಾಡಿದರು.

ನಗರ ಪೊಲೀಸ್ ಆಯುಕ್ತ ಎನ್.ಸತೀಶಕುಮಾರ್, ಡಿಸಿಪಿ ಕಿಶೋರ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ ಸುಧಾಕರ ಲೋಖಂಡೆ, ವೀರಶೈವ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಮೋದಿ, ಜಿಲ್ಲಾ ಆರೋಗ್ಯ ಇಲಾಖೆಯ ಮೇಲ್ವಿಚಾರಕ ಮಂಜುನಾಥ ಕಂಬಳಿಮಠ ಸೇರಿದಂತೆ ಹಲವು ಗಣ್ಯರು ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.