ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಪ್ಪಾಸಾಹೇಬ ತೀರ್ಥೆಗೆ ಬಸವ ಪುರಸ್ಕಾರ

Published 13 ಜೂನ್ 2024, 15:39 IST
Last Updated 13 ಜೂನ್ 2024, 15:39 IST
ಅಕ್ಷರ ಗಾತ್ರ

ಆಳಂದ: ತಾಲ್ಲೂಕಿನ ಜಾನಪದ ಸಾಹಿತ್ಯ ಪರಿಷತ್ತಿನ ತಾಲ್ಲೂಕಾಧ್ಯಕ್ಷ, ಮುಖ್ಯಶಿಕ್ಷಕ ಅಪ್ಪಾಸಾಹೇಬ ತೀರ್ಥೆ ಅವರು ಬೆಂಗಳೂರಿನ ಬಸವ ಪರಿಷತ್ತು ಸಂಸ್ಥೆ ಕೊಡಮಾಡುವ ಬಸವ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಆಳಂದ ಪಟ್ಟಣದ ವಿವೇಕ ವರ್ಧನಿ ಶಾಲೆ ಮುಖ್ಯಶಿಕ್ಷಕರಾದ ಅಪ್ಪಾಸಾಹೇಬ ಅವರು ಕಳೆದ 30 ವರ್ಷದಿಂದ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತು, ವಚನ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು ಹಾಗೂ ಜಾನಪದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಶರಣರ ಚಿಂತನೆಗಳ ಪ್ರಸಾರ ಕಾರ್ಯದಲ್ಲಿ ತೊಡಗಿದ್ದು, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೂ ಭಾಜನರಾಗಿದ್ದಾರೆ. ‘ಅವರ ಸಾಮಾಜಿಕ, ಸಾಂಸ್ಕೃತಿಕ ಸಂಘಟನೆ ಸೇವೆ ಪರಿಗಣಿಸಿ ಬಸವ ಪುರಸ್ಕಾರಕ್ಕೆ ಕಲಬುರಗಿ ಜಿಲ್ಲೆಯಿಂದ ಆಯ್ಕೆ ಮಾಡಲಾಗಿದೆ’ ಎಂದು ಬಸವ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಹಿರೇಮಠ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT