ಚಿತ್ತಾಪುರ: ‘ವಾಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಆರೋಪಿಯನ್ನು ನಮ್ಮ ಹುಡುಗ ಬಂದಿದ್ದಾನಾ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಕೇಳಿದ್ದು ಸರೀನಾ’ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್ ಪ್ರಶ್ನಿಸಿದ್ದಾರೆ.

ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಪ್ಪು ಯಾರೇ ಮಾಡಿದರೂ ಶಿಕ್ಷೆ ಕೊಡಿಸುವುದು ಸಚಿವರ ಕೆಲಸ. ಅದನ್ನು ಮರೆತು ಹೀಗೆ ಮಾತನಾಡಿದ್ದು ನಾಚಿಗೇಡಿನ ಸಂಗತಿ. ಸರ್ಕಾರಿ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿದ್ದಾರೆ’ ಎಂದು ಟೀಕಿಸಿದರು.

‘ಛಲವಾದಿ ನಾರಾಯಣಸ್ವಾಮಿ ಯಾವಾಗ ಕಾಂಗ್ರೆಸ್ ತೊರೆದು ಬಿಜೆಪಿ ಅಸೇರಿದ್ದಾರೊ ಅಂದಿನಿಂದ ಪ್ರಿಯಾಂಕ್ ಖರ್ಗೆ ಅವರ ಮಾನಸಿಕ ಮತ್ತು ಬೌದ್ಧಿಕತೆ ಕುಸಿದಿದೆ’ ಎಂದು ವ್ಯಂಗ್ಯವಾಡಿದರು.

ಜಿಲ್ಲಾ ಬಿಜೆಪಿ ಒಬಿಸಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್ ಮಾತನಾಡಿ, ‘ಮಾತೆತ್ತಿದ್ದರೆ ಆರ್.ಎಸ್.ಎಸ್ ಬಗ್ಗೆ ಮಾತನಾಡುವ ಸಚಿವ ಪ್ರಿಯಾಂಕ್ ಅವರಿಗೆ ಆರ್ಎಸ್ಎಸ್ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ತೆಲಂಗಾಣದ ಸಿಎಂ ರೇವಂತರೆಡ್ಡಿ ಅವರಿಂದ ಪಡೆದುಕೊಳ್ಳಲಿ. ರಾಜ್ಯದಲ್ಲಿ ನಿಮ್ಮದೇ ಸರ್ಕಾರ ಅಧಿಕಾರದಲ್ಲಿದೆ, ಧೈರ್ಯವಿದ್ದರೆ ರಾಜ್ಯದಲ್ಲಿ ಆರ್ಎಸ್ಎಸ್ ಬ್ಯಾನ್ ಮಾಡಿ ತೋರಿಸಿ’ ಎಂದು ಸವಾಲು ಹಾಕಿದರು.

ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಮಾತನಾಡಿದರು. ಪಕ್ಷದ ಪ್ರದಾನ ಕಾರ್ಯದರ್ಶಿ ನಾಗರಾಜ ಹೂಗಾರ, ಪುರಸಭೆ ಸದಸ್ಯ ರಮೇಶ ಬಮ್ಮನಳ್ಳಿ, ಮುಖಂಡ ಶಿವರಾಮ ಚವಾಣ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.