ಬಸವಸಾಗರ: 92 ಸಾವಿರ ಕ್ಯುಸೆಕ್ ನೀರು ನದಿಗೆ

7
ಕೃಷ್ಣಾ ನದಿ ಪಾತ್ರದಲ್ಲಿ ನಿರಂತರ ಮಳೆ, ಹೆಚ್ಚಿದ ಒಳಹರಿವು, 24 ಸಾವಿರ ಕ್ಯುಸೆಕ್‌ ಹೊರಹರಿವು ಹೆಚ್ಚಳ

ಬಸವಸಾಗರ: 92 ಸಾವಿರ ಕ್ಯುಸೆಕ್ ನೀರು ನದಿಗೆ

Published:
Updated:
Deccan Herald

ಹುಣಸಗಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಮಂಗಳವಾರದಿಂದ 92 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ ಎಂದು ಅಣೆಕಟ್ಟೆಯ ವಲಯ ಪ್ರಭಾರಿ ಕಾರ್ಯನಿರ್ವಾಹಕ ಎಂಜಿನಿಯರ್ ಜಯಪ್ರಕಾಶ ಪೊದ್ದಾರ್ ತಿಳಿಸಿದ್ದಾರೆ.

ಸೋಮವಾರ ಸಂಜೆಯವರೆಗೆ 68 ಸಾವಿರ ಕ್ಯುಸೆಕ್‌ ಹೊರಹರಿವು ಇತ್ತು. ನದಿ ಪಾತ್ರದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗಿರುವ ಕಾರಣ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ (90 ಸಾವಿರ ಕ್ಯೂಸೆಕ್) ನೀರು ಹರಿದು ಬರುತ್ತಿದೆ. ಹೀಗಾಗಿ, ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ 24 ಸಾವಿರ ಕ್ಯುಸೆಕ್‌ ಹೊರ ಹರಿವು ಹೆಚ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜಲಾಶಯದ ಮಟ್ಟ 492.11 ಮೀಟರ್ ಕಾಯ್ದುಕೊಂಡು ಹೆಚ್ಚಿನ ಪ್ರಮಾಣದ ನೀರನ್ನು 11 ಕ್ರಸ್ಟ್‌ಗೇಟ್‌ ಮೂಲಕ ನದಿಗೆ ಹರಿಸಲಾಗುತ್ತಿದೆ.

Tags: 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !