ಕಲಬುರಗಿ: ಜಿಲ್ಲೆಯ ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಇಲಾಖೆ (ಬಿಸಿಎಂ) ವಿದ್ಯಾರ್ಥಿ ನಿಲಯಗಳಿಗೆ ಆಹಾರ ಮತ್ತು ಇತರೆ ಸಾಮಗ್ರಿಗಳನ್ನು ಸರಬರಾಜು ಮಾಡುವ ಟೆಂಡರ್ ಸಂಬಂಧಿಸಿದಂತೆ, ಟೆಂಡರ್ ಷರತ್ತುಗಳ ಉಲ್ಲಂಘನೆ ಮಾಡಿದ್ದು, ಈ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಎಂ.ಎಸ್. ಪಾಟೀಲ ನರಿಬೋಳ, ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರವಣಕುಮಾರ ಡಿ.ನಾಯಕ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಸರ್ಕಾರದ ನಿಯಮಗಳ ಪ್ರಕಾರ ಟೆಂಡರ್ದಾರರು ಯಾವುದೇ ವಸತಿನಿಲಯಗಳಿಗೆ ಆಹಾರ ಪದಾರ್ಥಗಳನ್ನು ಪ್ರತಿ ತಿಂಗಳು 2ನೇ ತಾರೀಕು ಒಳಗಾಗಿ ಸರಬರಾಜು ಮಾಡಬೇಕು. ಆದರೆ ಸರಿಯಾಗಿ ಆಹಾರ ಪದಾರ್ಥಗಳನ್ನು ಸರಬರಾಜು ಮಾಡದೆ ಪ್ರತಿ ತಿಂಗಳು ಬೋಗಸ್ ಬಿಲ್ ಮಾಡಿಕೊಂಡು ಸರ್ಕಾರಕ್ಕೆ ಮತ್ತು ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ತಾಲ್ಲೂಕಿನ ಅನೇಕ ವಸತಿ ನಿಲಯಗಳಿಗೆ ಸಮರ್ಪಕವಾಗಿ ಇಲ್ಲಿಯವರೆಗೆ ಯಾವುದೇ ರೀತಿಯ ಆಹಾರ ಮತ್ತು ಆಹಾರೇತರ ಸಾಮಗ್ರಿಗಳನ್ನು ಸರಬರಾಜು ಮಾಡದೆ ಎಲ್ಲಾ ವಸ್ತುಗಳನ್ನು ಸರಬರಾಜು ಮಾಡಲಾಗಿದೆ ಎಂದು ಕಾಗದ ಪತ್ರದಲ್ಲಿ ತೋರಿಸಿ ವಿದ್ಯಾರ್ಥಿಗಳ ಅನ್ನಕ್ಕೆ ಕನ್ನ ಹಾಕಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಂಡು ಉನ್ನತ ಮಟ್ಟದ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.