ಭಾನುವಾರ, ಸೆಪ್ಟೆಂಬರ್ 19, 2021
30 °C

ಖೂಬಾ ನೇತೃತ್ವದ ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ, ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಕಲಬುರ್ಗಿ: ಕೇಂದ್ರದ ನೂತನ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಮಂಗಳವಾರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಗರದ ಬ್ರಹ್ಮಪುರ ಠಾಣೆ ಪೊಲೀಸರು ಬಿಜೆಪಿ ಜಿಲ್ಲಾ ಮುಖಂಡರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಕೋವಿಡ್‌ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಬಹಿರಂಗ ಸಮಾವೇಶ, ರಾಜಕೀಯ ಕಾರ್ಯಕ್ರಮಗಳು ಹಾಗೂ ಹೆಚ್ಚು ಜನರು ಸೇರುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆ ನಿರ್ಬಂಧವನ್ನು ಉಲ್ಲಂಘಿಸಿ ಯಾತ್ರೆ ಆಯೋಜಿಸಿದ್ದಲ್ಲದೇ ರಾತ್ರಿ ಕರ್ಫ್ಯೂ ನಿಯಮಗಳನ್ನು ಮೀರಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಪ್ರಯುಕ್ತ ತಹಶೀಲ್ದಾರ್ ಪ್ರಕಾಶ ಕುದರಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಕಲಬುರ್ಗಿ ಪೊಲೀಸ್ ಕಮಿಷನರ್ ಡಾ. ವೈ.ಎಸ್. ರವಿಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಜನಾಶೀರ್ವಾದ ಯಾತ್ರೆ ನಿಮಿತ್ತ ನಗರದ ವಿವಿಧೆಡೆ ಸಚಿವರು, ಶಾಸಕರ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ನಗರದಲ್ಲಿ ಮಹಾನಗರ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಾಲಿಕೆ ಆಯುಕ್ತರು ಅವುಗಳನ್ನು ಮಂಗಳವಾರ ಮಧ್ಯಾಹ್ನವೇ ತೆರವುಗೊಳಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು