ಗುರುವಾರ , ಅಕ್ಟೋಬರ್ 21, 2021
29 °C

ಭಾರತ ಬಂದ್: ಕಲಬುರ್ಗಿಯಲ್ಲಿ ಬಸ್ ಸಂಚಾರ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು‌ ಎಂದು ಒತ್ತಾಯಿಸಿ ವಿವಿಧ ರೈತ ಹಾಗೂ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಅಂಗವಾಗಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಪ್ರತಿಭಟನಾಕಾರರು ಬಸ್ ಸಂಚಾರ ಸ್ಥಗಿತಗೊಳಿಸಿದ್ದಾರೆ.

ವಿದ್ಯುತ್ ‌ತಿದ್ದುಪಡಿಯನ್ನು ವಾಪಸ್ ಪಡೆಯಬೇಕು. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ ಮಾಡಬಾರದು ‌ಎಂದೂ ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಇತ್ತು, ಮುಂದೆಯೂ ಇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿದ್ದಾರೆ. ಆದರೆ ಇದು ಸುಳ್ಳು ಎಂಬುದು ಅವರಿಗೇ ಗೊತ್ತಿದೆ. ಇಂತಹ ನಾಚಿಕೆಯಿಲ್ಲದೇ ಸುಳ್ಳು ‌ಹೇಳುವ ಪ್ರಧಾನಿ ಮತ್ತೊಬ್ಬರಿಲ್ಲ ಎಂದರು.

ಭಾರತ್ ಬಂದ್ ಲೈವ್ ಅಪ್‌ಡೇಟ್ಸ್‌: 

ಕರಾಳ ಕಾನೂನುಗಳನ್ನು ವಾಪಸ್ ಪಡೆಯಬೇಕು ಎಂದು ಘೋಷಣೆ ಕೂಗಿದರು.

ರೈತ ಕೃಷಿ ‌ಕಾರ್ಮಿಕ ಸಂಘಟನೆ ರಾಜ್ಯ ಕಾರ್ಯದರ್ಶಿ ಎಚ್.ವಿ.ದಿವಾಕರ್, ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ ನೀಲಾ, ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಅಖಿಲ ಭಾರತ ಕಿಸಾನ್ ಸಭಾ ಜಿಲ್ಲಾ ಅಧ್ಯಕ್ಷ ಮೌಲಾ ಮುಲ್ಲಾ, ಮುಖಂಡರಾದ ಶ್ರೀಮಂತ ಬಿರಾದಾರ, ಕೆ.ಎಸ್. ಶರ್ಮಾ, ಪಾಂಡುರಂಗ ಮಾವಿನಕರ, ಮಹೇಶ ಎಸ್.ಬಿ, ಜಗನ್ನಾಥ ಎಚ್.ಎಸ್., ಸ್ನೇಹಾ ಕಟ್ಟಿಮನಿ, ರಾಧಾ, ಶಹನಾಜ್ ಅಖ್ತರ್, ದೀಪಾ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು