ಕಲಬುರಗಿ: ನಗರದ ಅಂಜುಮನ್ ತರಖಿ–ಎ–ಉರ್ದು ಹಿಂದ್ ಸಭಾಂಗಣದಲ್ಲಿ ನವೆಂಬರ್ 22ರಂದು ಬೆಳಿಗ್ಗೆ 10.30 ಗಂಟೆಗೆ ‘ಭಾವದರ್ಪಣ’ ಎಂಬ ಪುಸ್ತಕ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮೈತ್ರಿ ಫೌಂಡೇಷನ್ ಪ್ರಧಾನ ಕಾರ್ಯದರ್ಶಿ ರೇಣುಕಾ ಸಿಂಗೆ ಹೇಳಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರು ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಹೇಳಿದರು.
ಸಾಹಿತಿ ಪ್ರೊ. ಆರ್.ಕೆ. ಹುಡಗಿ ಪುಸ್ತಕ ಕುರಿತು ಮಾತನಾಡಲಿದ್ದಾರೆ ಎಂದ ಅವರು, ‘ಚಿತ್ತಾಪುರ ತಾಲ್ಲೂಕಿನ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ತಾಲ್ಲೂಕಿನ ಅಭಿವೃದ್ಧಿ ಮೈಲುಗಲ್ಲು ಹಾಗೂ ಸಮಸ್ಯೆಗಳ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಎಲ್ಲ ಪ್ರಬಂಧಗಳನ್ನು ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಹೊರತರಲಾಗಿದೆ’ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶಹನಾಜ್, ಶಶಿಕಲಾ ಪವಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.