ಗುರುವಾರ , ಅಕ್ಟೋಬರ್ 22, 2020
22 °C

ಭೀಮಾನದಿಗೆ 3.50 ಲಕ್ಷ ಕ್ಯುಸೆಕ್ ನೀರು: ಬಡಾವಣೆಗೆ ನುಗ್ಗಿದ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಸನ್ನತಿ ಬ್ಯಾರೇಜ್ನಿಂದ ಭೀಮಾ ನದಿಗೆ 3.50 ಲಕ್ಷ ಕ್ಯುಸೆಕ್ ನೀರು ಹರಿಸುತ್ತಿದ್ದು, ನದಿಯಂಚಿನ ನಗರದ ಬಡಾವಣೆಗೆ ನೀರು ನುಗ್ಗಿದೆ.

ಭೀಮಾ‌ನದಿಗೆ ಹೊಂದಿಕೊಂಡಿರುವ ವೀರಭದ್ರೇಶ್ವರ ಬಡಾವಣೆಯ ವಿನಾಯಕ ದೇವಸ್ಥಾನ ಹಾಗೂ ಮನೆಗಳಿಗೆ ನೀರು ನುಗ್ಗಿ ಜಲಾವೃತ್ತಗೊಂಡಿದೆ.

ಭೀಮಾ ನದಿಗೆ ಮತ್ತಷ್ಟು ನೀರು ಹರಿಸುವ ಸಾಧ್ಯತೆ ಇರುವುದರಿಂದ ರೈಲ್ವೆ ಹಳಿಯ ಸಮೀಪ ನೀರು ಆವರಿಸುವ ಸಾಧ್ಯತೆ ಇದೆ. ಇದರಿಂದ ಭೀಮಾ ನದಿ ನೀರು ನಗರದ ವಿವಿಧ ಬಡಾವಣೆಗಳಿಗೆ ನುಗ್ಗುವ ಸಂಭವವಿದೆ ಎಂದು ಎಂದು ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು