ಕಲಬುರಗಿ: ನಗರದ ಶಹಾಬಾದ್ ರಸ್ತೆಯಲ್ಲಿರುವ ಮನೆ ಬಳಿ ನಿಲ್ಲಿಸಿದ್ದ ಭೀಮ್ ಆರ್ಮಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ ಹುಗ್ಗಿ ಅವರ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ ತಿರುವು ಪಡೆದುಕೊಂಡಿದೆ. ತಮ್ಮದೆ ಸಂಬಂಧಿಕರ ವಿರುದ್ಧ ಅನುಮಾನ ವ್ಯಕ್ತಪಡಿಸಿ ಪ್ರಕರಣ ದಾಖಲಿಸಿದ್ದಾರೆ.

ಶುಕ್ರವಾರ ಸಂಜೆ ಕಾರಿಗೆ ಬೆಂಕಿ ಹಚ್ಚಲಾಗಿತ್ತು. ಶನಿವಾರ ಬೆಳಿಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಸತೀಶ ಹುಗ್ಗಿ ‘ಜೈ ಶ್ರೀರಾಮ ಎಂದು ಕೂಗಿ ಆರ್ಎಸ್ಎಸ್ನವರು ನನ್ನ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಆರ್ಎಸ್ಎಸ್ ಪಥ ಸಂಚಲನಕ್ಕೆ ವಿರೋಧ ಮಾಡಿದ್ದರಿಂದ ಇಂತಹ ಕೃತ್ಯ ಎಸಗಲಾಗಿದೆ’ ಎಂದು ಆರೋಪಿಸಿದ್ದರು.

ಆದರೆ, ಪೊಲೀಸರ ವಿಚಾರಣೆ ವೇಳೆ ಹಳೆಯ ಪ್ರಕರಣ ಸಂಬಂಧ ಕೆಲವರು ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ವಿಶ್ವವಿದ್ಯಾಲಯ ಠಾಣೆಯಲ್ಲಿ ಸಂಬಂಧಿಕರಾದ ರಾಜಕುಮಾರ ಹುಗ್ಗಿ, ಶರಣಪ್ರಕಾಶ ಹುಗ್ಗಿ, ಶ್ರೀಶೈಲ ಹುಗ್ಗಿ, ಶಿವಕುಮಾರ ಹುಗ್ಗಿ ವಿರುದ್ಧ ದೂರು ದಾಖಲಿಸಿದ್ದಾರೆ.

ಬಾಲಕಿಗೆ ಲೈಂಗಿಕ ದೌರ್ಜನ್ಯ

ಕಲಬುರಗಿ: ಚಾಕೊಲೇಟ್ ಕೊಡಿಸುವುದಾಗಿ ಐದು ವರ್ಷದ ಬಾಲಕಿ ಮೇಲೆ 60 ವರ್ಷದ ವೃದ್ಧ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಆರ್.ಜಿ.ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಆಯಮ್ಮ ದೂರು ನೀಡಿದ್ದಾರೆ. ಆಸ್ಪತ್ರೆ ಸಮೀಪ ಹೂವಿನ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದ ಫೂಲ್ವಾಲೆ ಬಾಬಾ ಅಲಿಯಾಸ್ ಬಾಬಾ ಶೇಖ್ (60) ಎಂಬಾತನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.