ಅಫಜಲಪುರ ತಾಲ್ಲೂಕಿನ ಸಿದ್ದನೂರು ಗ್ರಾಮದ ಹತ್ತಿರ ಭೀಮ ಕಾಲುವೆಗೆ ಹರಿಯದ ನೀರು
60 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಭೀಮ ಏತ ನೀರಾವರಿ ಯೋಜನೆಗೆ ಸರ್ಕಾರ ಖರ್ಚು ಮಾಡಿದ ಅನುದಾನ ಸರಿಯಾಗಿ ಬಳಕೆಯಾಗಿಲ್ಲ. ರೈತರ ಕಷ್ಟಗಳು ತಪ್ಪಲಿಲ್ಲ ಕಾಲುವೆಗೆ ನೀರು ಬರಲಿಲ್ಲ
ಶಿವಕುಮಾರ್ ನಾಟೀಕಾರ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ
ಸೊನ್ನ ಭೀಮ ನದಿ ಏತ ನೀರಾವರಿ ಯೋಜನೆಯಿಂದ 43 ಗ್ರಾಮಗಳ ಜಮೀನುಗಳಿಗೆ ಕಾಲುವೆಗಳ ಮೂಲಕ ಸಮರ್ಪಕವಾಗಿ ನೀರು ಹರಿಸಲು ರಾಜ್ಯ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕ್ರಮ ಕೈಗೊಳ್ಳಬೇಕು
ಶ್ರೀಮಂತ ಬಿರಾದಾರ ತಾಲ್ಲೂಕು ಪ್ರಾಂತ ರೈತ ಸಂಘ ತಾಲ್ಲೂಕು ಅಧ್ಯಕ್ಷ
ಸೊನ್ನ ಭೀಮ ನದಿ ಬ್ಯಾರೇಜ್ ಕಂ ಬ್ರಿಡ್ಜ್‌ನಲ್ಲಿ ನೀರು ಸಂಗ್ರಹವಾಗಿದ್ದರೂ ಅವೈಜ್ಞಾನಿಕ ಕಾಲುವೆ ನಿರ್ಮಾಣ ಮಾಡಿದ್ದರಿಂದ ರೈತರ ಜಮೀನುಗಳಿಗೆ ನೀರು ಬರುತ್ತಿಲ್ಲ. ಭೀಮ ಏತ ನೀರಾವರಿ ಉಪ ವಿಭಾಗದವರು ಒಂದು ವಾರದಲ್ಲಿ ಕಾಲುವೆಗಳನ್ನು ಸ್ವಚ್ಛಗೊಳಿಸಿ ಯೋಜನೆಯ ಕೊನೆಯ ರೈತನಿಗೆ ನೀರು ಹರಿಯುವಂತೆ ವ್ಯವಸ್ಥೆ ಮಾಡಬೇಕು.
–ಗುರು ಚಾಂದಕೋಟೆ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ