ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ರಸ್ತೆ ಸುಧಾರಣೆಗೆ ಒತ್ತು; ಅಜಯ್ ಸಿಂಗ್

ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
Last Updated 24 ಏಪ್ರಿಲ್ 2022, 5:12 IST
ಅಕ್ಷರ ಗಾತ್ರ

ಜೇವರ್ಗಿ: ‘ಪಟ್ಟಣ‌ ಸೇರಿದಂತೆ ಗ್ರಾಮೀಣ ರಸ್ತೆಗಳ ಸುಧಾರಣೆಗೆ ಹೆಚ್ಚಿನ ಪಾಮುಖ್ಯತೆ ನೀಡಲಾಗುತ್ತಿದೆ. ವಿಶೇಷವಾಗಿ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ಕೊಡಲಾಗುವುದು’ ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.

ತಾಲ್ಲೂಕಿನ ಆಂದೋಲಾ ಗ್ರಾಮದಲ್ಲಿ ಶುಕ್ರವಾರ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆ ಅಡಿಯಲ್ಲಿ ₹2.34 ಕೋಟಿ ಅಂದಾಜು ವೆಚ್ಚದಲ್ಲಿ 3.4 ಕಿ.ಮೀ. ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಜೇವರ್ಗಿ ತಾಲ್ಲೂಕಿನ, ಮತಕ್ಷೇತ್ರದ ಹಳ್ಳಿಗಳ ರಸ್ತೆ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಈಗಾಗಲೇ ಆಂದೋಲಾ ಗ್ರಾಮದಲ್ಲಿ ಸುಮಾರು ₹50 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದೆ. ಅಲ್ಲದೇ ಹೋಬಳಿ ಕೇಂದ್ರಗಳಾದ ಮಂದೇವಾಲ, ಇಜೇರಿ, ಯಡ್ರಾಮಿಯಲ್ಲಿ ತಲಾ ₹50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದರು.

ಗುಡೂರ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು, ಆಂದೋಲಾದಿಂದ ಗಂವ್ಹಾರ ವರೆಗಿನ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ ಆಂದೋಲಾ ಗ್ರಾಮದಲ್ಲಿನ ಮೂಲಸೌಕರ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಗುರುಲಿಂಗಪ್ಪಗೌಡ ಮಾಲಿಪಾಟೀಲ, ಗೌಡಪ್ಪಗೌಡ ಪೊಲೀಸ್ ಪಾಟೀಲ, ಸಂಗನಗೌಡ ಮಾಲಿಪಾಟೀಲ, ಕಾಶಿಂ ಪಟೇಲ ಮುದಬಾಳ, ಕಾಶಿರಾಯಗೌಡ ಯಲಗೋಡ, ಮಲ್ಲಿಕಾರ್ಜುನ ಲಕ್ಕಣ್ಣಿ, ಯಶವಂತ ಹೋತಿನಮಡು, ಗೋವಿಂದ ತುಳೇರ, ಗಿರೀಶ ಹವಲ್ದಾರ್, ನಬೀ ಕುಕನೂರ, ಮೈಲಾರಿ ಮಹೇಂದ್ರಕರ್, ಬಸವರಾಜ ದೇವದುರ್ಗ, ಮಕ್ಬೂಲ್ ಜಮಾದಾರ, ಸಿರಾಜುದ್ದೀನ್ ತಿರಂದಾಜ, ದಂಡಪ್ಪ ದಂಡಗುಂಡ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT