ಜೇವರ್ಗಿ: ಮಲ್ಲಾಬಾದ ಏತ ನೀರಾವರಿ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದಿಂದ ಈಚೆಗೆ ತಾಲ್ಲೂಕಿನ ಕೆಲ್ಲೂರ ಗ್ರಾಮದ ಹತ್ತಿರದ ಬೀದರ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಮಹಾಂತಗೌಡ ನಂದಿಹಳ್ಳಿ ಮಾತನಾಡಿ, ‘ಜೇವರ್ಗಿ, ಯಡ್ರಾಮಿ, ಶಹಾಪುರ, ಸುರಪುರ ತಾಲ್ಲೂಕಿನ ಸಾವಿರಾರು ಹೆಕ್ಟೇರ್ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮಲ್ಲಾಬಾದ ಏತ ನೀರಾವರಿ ಯೋಜನೆ ಜಾರಿಗಾಗಿ 20 ವರ್ಷಗಳ ನಿರಂತರ ಹೋರಾಟ ನಡೆದಿದೆ. ಆದರೆ, ಕಳಪೆ ಕಾಮಗಾರಿ ಮಾಡಿರುವ ಗುತ್ತಿಗೆದಾರನ ಜತೆ ಶಾಮೀಲಾಗಿರುವ ಸಂಬಂಧಪಟ್ಟ ಎಇಇ ಹಾಗೂ ಸಹಾಯಕ ಎಂಜಿನಿಯರ್ ಅವರನ್ನು ಕೂಡಲೇ ಅಮಾನತು ಮಾಡಿ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಬೇಕು’ ಎಂದು ಆಗ್ರಹಿಸಿದರು.

‘ಕಾಮಗಾರಿಗೆ ಬಳಸುತ್ತಿರುವ ಸ್ಟೀಲ್, ಸಿಮೆಂಟ್ ಬದಲಾಯಿಸಿ ಗುಣಮಟ್ಟದ ಸಾಮಗ್ರಿ ಬಳಸಬೇಕು. ಕಳಪೆಯಾಗಿರುವ 1.5 ಕಿ.ಮೀ ಉದ್ದದ ಕಾಂಕ್ರೀಟ್ ಲೈನಿಂಗ್ ತೆಗೆದುಹಾಕಬೇಕು’ ಎಂದರು.

‘ಕಾಲುವೆಗಳು ಹಾದು ಹೋಗಿರುವ ರೈತರ ಜಮೀನುಗಳಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು. ನಂದಿಹಳ್ಳಿ ಹತ್ತಿರ ಕಾಲುವೆ ಕಾಮಗಾರಿ ಶೀಘ್ರ ಪ್ರಾರಂಭಿಸಬೇಕು. ಒಂದುವೇಳೆ ನಿರ್ಲಕ್ಷ್ಯ ವಹಿಸಿದರೆ ಕಚೇರಿಗೆ ಬೀಗ ಹಾಕಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕೃಷ್ಣ ಭಾಗ್ಯ ಜಲ ನಿಗಮದ ಅಧೀಕ್ಷಕ ಅಭಿಯಂತರ ತಿಪ್ಪಣಗೌಡ ಅನ್ನದಾನಿ ಮಾತನಾಡಿ, ‘1.5 ಕಿ.ಮೀ ಲೈನಿಂಗ್ ಮಾಡಲಾಗಿದ್ದು, 28 ದಿನಗಳ ನಂತರ ಗುಣಮಟ್ಟದ ನಿಯಂತ್ರಣ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುವುದು. ಕಾಮಗಾರಿಯಲ್ಲಿ ಕಳಪೆ ಕಂಡುಬಂದರೆ ಮುಲಾಜಿಲ್ಲದೇ ತೆಗೆದುಹಾಕಿ ಗುಣಮಟ್ಟದ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಜೂನ್ ತಿಂಗಳಲ್ಲಿ ನಂದಿಹಳ್ಳಿ ಬಳಿ ಕಾಲುವೆ ಕಾಮಗಾರಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು’ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

ನಂತರ ಪ್ರತಿಭಟನಕಾರರು ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಹಾಗೂ ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಣಗೌಡ ಪಾಟೀಲ ಕೆಲ್ಲೂರ, ರಾಜ್ಯ ಮಹಿಳಾ ಕಾರ್ಯದರ್ಶಿ ದೇವಮ್ಮ ಯಾಳವಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಲ್ಲಾ ಪಟೇಲ್ ಇಜೇರಿ, ಯಡ್ರಾಮಿ ತಾಲ್ಲೂಕು ಅಧ್ಯಕ್ಷ ಲಾಳೆಸಾಬ ಮನಿಯಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದು ಯಂಕಂಚಿ, ಜೇವರ್ಗಿ ತಾಲ್ಲೂಕು ಅಧ್ಯಕ್ಷ ಸಿದ್ದಣಗೌಡ ರಾಜವಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-31-1218202927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.