ಸೋಮವಾರ, ನವೆಂಬರ್ 23, 2020
22 °C

ವಾಡಿ| ಬೈಕ್‌ಗಳ ಡಿಕ್ಕಿ; ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಡಿ (ಕಲಬುರ್ಗಿ ಜಿಲ್ಲೆ): ಲಾಡ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಮಂಗಳವಾರ ಸಂಜೆ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ.

ಲಾಡ್ಲಾಪುರ ಗ್ರಾಮದ ಸಹೋದರರಾದ ಬಸಪ್ಪ ಗಂಜಿ (32), ಮರೆಪ್ಪ ಗಂಜಿ (50) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಸಹೋದರ ಹಣಮಂತ ಗಂಜಿ ಗಂಭೀರ ಗಾಯಗೊಂಡಿದ್ದಾರೆ. ಅಲ್ಲೂರು ಗ್ರಾಮದ ದೇವೇಂದ್ರ ಬೋಗೊಣಿ (55) ಹಾಗೂ ಮಲ್ಲಪ್ಪ ದೇಸಿ (35) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕಾಶಿನಾಥ ದೇವೇಂದ್ರ ಬೋಗೊಣಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.

ಡಿಕ್ಕಿಯ ರಭಸಕ್ಕೆ ಎರಡು ಬೈಕ್‌ಗಳು ನಜ್ಜುಗುಜ್ಜಾಗಿವೆ. ಅಪಘಾತದಿಂದ ಒಂದು ಗಂಟೆ ಕಾಲ ಕಿಲೋಮಿಟರ್ ಗಟ್ಟಲೇ ವಾಹನಗಳು ನಿಂತ ಪರಿಣಾಮ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಲಾಡ್ಲಾಪುರ ಗ್ರಾಮದ ಮೂವರು ಸಹೋದರರು ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದು, ಈಚೆಗೆ ತಮ್ಮ ತಂದೆಯ ಅಂತ್ಯಸಂಸ್ಕಾರಕ್ಕೆಂದು ಗ್ರಾಮಕ್ಕೆ ಬಂದಿದ್ದರು. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.