ಕಾಳಗಿ: ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತೆರಳುತ್ತಿದ್ದ ಶಿಕ್ಷಕ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ಘಟನೆ ತಾಲ್ಲೂಕಿನ ತೆಂಗಳಿ–ಸಾಲಹಳ್ಳಿ ರಸ್ತೆ ಮಾರ್ಗದಲ್ಲಿ ಗುರುವಾರ ಸಂಭವಿಸಿದೆ.

ಕೊಡದೂರ ತಾಂಡಾದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಾಣಿಕರಾವ ಪಾಟೀಲ ದೋಟಿಕೋಳ (49) ಗಾಯಗೊಂಡವರು.

ರಸ್ತೆ ಮಧ್ಯದ ಹಂಪ್ಗೆ ಬೈಕ್ ಸ್ಕಿಡ್ ಆಗಿದೆ. ಹೆಲ್ಮೆಟ್ ಧರಿಸಿದ್ದರಿಂದ ತಲೆ ಮತ್ತು ಮುಖಕ್ಕೆ ಯಾವುದೇ ಗಾಯವಾಗಿಲ್ಲ. ಎರಡೂ ಕೈ ಹಾಗೂ ಕಾಲುಗಳಿಗೆ ತೀವ್ರ ಗಾಯವಾಗಿ ಬಲಗೈಗೆ ಹೊಲಿಗೆ ಹಾಕಲಾಗಿದೆ.

ಘಟನೆ ನೋಡಿದ ಜನರು ಗಾಯಾಳು ಶಿಕ್ಷಕನನ್ನು ತೆಂಗಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಕಾಳಗಿ ತಹಶೀಲ್ದಾರ್ ಪೃಥ್ವಿರಾಜ ಪಾಟೀಲ, ತಾಲ್ಲೂಕು ಪಂಚಾಯಿತಿ ಇಒ ಡಾ.ಬಸಲಿಂಗಪ್ಪ ಡಿಗ್ಗಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅನೀಲಕುಮಾರ ಗುತ್ತೇದಾರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ, ತಾಲ್ಲೂಕು ಅಧ್ಯಕ್ಷ ಮಹಾಂತೇಶ ಪಂಚಾಳ ಅನೇಕ ಪದಾಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.