ಮಂಗಳವಾರ, ಜನವರಿ 18, 2022
27 °C

ಮೊಲ, ಕೌಜುಗ, ಗಿಳಿ ವಶಕ್ಕೆ: ಮಾರಾಟಗಾರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ನಗರದ ಸೂಪರ್ ಮಾರ್ಕೆಟ್‌ನ ಸಂಗಮ ಚಿತ್ರಮಂದಿರದ ಬಳಿ ಅಕ್ರಮವಾಗಿ ಗಿಳಿ, ಕೌಜುಗ, ಆಮೆ, ಮೊಲಗಳನ್ನು ಮಾರಾಟ ಮಾಡುತ್ತಿದ್ದ ಇತಿಯಾತ್ ಕಾಲೊನಿ ನಿವಾಸಿ ಹಾಜಿಖಾನ್ ಖಾಸಿಂಖಾನ್ ಪಠಾಣ್ (50) ಎಂಬಾತನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿ ಹಕ್ಕಿಗಳಿದ್ದ ಗೂಡುಗಳನ್ನು ಬುಧವಾರ ವಶಕ್ಕೆ ಪಡೆದಿದ್ದಾರೆ.

ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಹುಣಚಿರಾಯ (ಕೇಶವ) ಮೋಟಗಿ ಅವರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಏಳು ಗೂಡುಗಳಲ್ಲಿದ್ದ ಪಕ್ಷಿ, ಪ್ರಾಣಿಗಳನ್ನು ವಶಪಡಿಸಿಕೊಂಡರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀಲಕುಮಾರ ಚವ್ಹಾಣ್, ಹುಣಚಿರಾಯ ಮೋಟಗಿ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.