ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಾಯುಕ್ತರಿಂದ ಅಹವಾಲು ಸ್ವೀಕಾರ 20ರಿಂದ

Published 13 ಆಗಸ್ಟ್ 2024, 16:00 IST
Last Updated 13 ಆಗಸ್ಟ್ 2024, 16:00 IST
ಅಕ್ಷರ ಗಾತ್ರ

ಕಲಬುರಗಿ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಆಗಸ್ಟ್ 20 ಹಾಗೂ 21ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಆ್ಯಂಟನಿ ಜಾನ್ ಜೆ.ಕೆ. ತಿಳಿಸಿದ್ದಾರೆ.

ಲೋಕಾಯುಕ್ತ ಡಿಎಸ್‌ಪಿ ಮಂಜುನಾಥ ಕೆ.ಗಂಗಲ್ ಹಾಗೂ ಪೊಲೀಸ್ ನಿರೀಕ್ಷಕಿ ಧ್ರವತಾರ ಸಿ. ಅವರು 20ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಕಮಲಾಪುರ ತಹಶೀಲ್ದಾರ್‌ ಕಚೇರಿ, ಡಿಎಸ್‌ಪಿ ಗೀತಾ ಟಿ. ಬೇನಹಾಳ, ಪೊಲೀಸ್ ನಿರೀಕ್ಷಕಿ ಅಕ್ಕಮಹಾದೇವಿ ಅವರು 21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಚಿಂಚೋಳಿ ತಹಶೀಲ್ದಾರ್‌ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಕಲಬುರಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿ, ದೂರವಾಣಿ ಸಂಖ್ಯೆ 08472-295364ಗೆ ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT