ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯದಲ್ಲಿ ಜಾತಿ, ಧರ್ಮ ಸೇರಿಸುತ್ತಿರುವ ಬಿಜೆಪಿ: ಬಸವರಾಜ ರಾಯರಡ್ಡಿ

Published 16 ಏಪ್ರಿಲ್ 2024, 14:26 IST
Last Updated 16 ಏಪ್ರಿಲ್ 2024, 14:26 IST
ಅಕ್ಷರ ಗಾತ್ರ

ಕುಕನೂರು: ‘ಬಿಜೆಪಿಯು ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತದೆ’ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ತಾಲ್ಲೂಕಿನ ಇಟಗಿ, ಬಿನ್ನಾಳ, ಯರೆಹಂಚಿನಾಳ ಗ್ರಾಮಗಳಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆ ಹಾಳು ಮಾಡುತ್ತಿದೆ. ಹಿಂದು–ಮುಸ್ಲಿಮರ ನಡುವೆ ಜಗಳ ಹಚ್ಚುತ್ತಿದೆ’ ಎಂದರು.

‘ಸಂಸದ ಸಂಗಣ್ಣ ಕರಡಿ ಅವರಿಗೆ ಬಿಜೆಪಿಯವರು ಮೋಸ ಮಾಡಿದ್ದಾರೆ. ಅವರು ಕಾಂಗ್ರೆಸ್‌ಗೆ ಬರುವ ವಿಶ್ವಾಸವಿದೆ. ಬಿಜೆಪಿಯಿಂದ ಸಂಗಣ್ಣನಿಗೆ ಅನ್ಯಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಪರ ಮತ ನೀಡಿ ಲಕ್ಷ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಬೇಕು’ ಎಂದರು.

ಹನುಮಂತಗೌಡ ಚಂಡೂರು, ಯಂಕಣ್ಣ ಯರಾಶಿ, ಶರಣಪ್ಪ ಗಾಂಜಿ, ಮಹೇಶ ಗಾವರಾಳ, ಮಹೇಶ ದೊಡ್ಮನಿ, ರೆಹಮಾನಸಾಬ್, ಸಂಗಮೇಶ ಗುತ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT