ಕಾಳಗಿ: ಸ್ಥಳೀಯ ಪಟ್ಟಣ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಪ್ರಯುಕ್ತ 11ವಾರ್ಡ್ಗಳಿಗೆ ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾಗಿದ್ದ ಮಂಗಳವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಅದ್ಧೂರಿ ಮೆರವಣಿಗೆ ಮೂಲಕ ಆಗಮಿಸಿದರು.

ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ ನೇತೃತ್ವದಲ್ಲಿ ಮುಖಂಡ ಬಾಬುರಾವ ಚವಾಣ, ಅಮರನಾಥ ಪಾಟೀಲ, ಶರಣಪ್ಪ ತಳವಾರ, ಶಶಿಕಲಾ ತೆಂಗಳಿ, ಬಸವರಾಜ ಬೆಣ್ಣೂರಕರ್, ನಿತಿನ್ ಗುತ್ತೇದಾರ, ರವಿರಾಜ ಕೊರವಿ, ಅಶೋಕ ಬಗಲಿ, ಸಂತೋಷ ಗಡಂತಿ, ವಿಜಯಕುಮಾರ ಚೇಂಗಟಾ, ಸಂತೋಷ ಪಾಟೀಲ, ಮಲ್ಲಿನಾಥ ಪಾಟೀಲ, ಮಹಾನಂದ ರೊಟ್ಟಿ ಮತ್ತಿತರರು ನೀಲಕಂಠ ಕಾಳೇಶ್ವರ ದೇವಸ್ಥಾನದಿಂದ ಬಸ್ ನಿಲ್ದಾಣದ ಮಾರ್ಗವಾಗಿ ಹಲಗೆ, ಬ್ಯಾಂಡ್, ಲಂಬಾಣಿ ನೃತ್ಯ, ಧ್ವನಿವರ್ಧಕ, ಪಟಾಕಿ ಸದ್ದು, ತೆರೆದ ವಾಹನದೊಂದಿಗೆ ತಾಲ್ಲೂಕು ಪಂಚಾಯಿತಿ ಕಚೇರಿಗೆ ಬಂದು ತಮ್ಮ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದ ಕಾಳಗಿ ನಗರ ಅಧ್ಯಕ್ಷ ವೇದಪ್ರಕಾಶ ಮೋಟಗಿ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ನೇರವಾಗಿ ತಾಲ್ಲೂಕು ಪಂಚಾಯಿತಿ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಬಸಲಿಂಗಪ್ಪ ಡಿಗ್ಗಿ ಅವರಿಗೆ ನಾಮಪತ್ರ ಸಲ್ಲಿಸಿದರು.

32 ನಾಮಪತ್ರಗಳ ಸಲ್ಲಿಕೆ: ಒಟ್ಟು 11 ವಾರ್ಡ್ಗಳ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಮಂಗಳವಾರ ಒಟ್ಟು 27 ನಾಮಪತ್ರಗಳು ಸಲ್ಲಿಕೆಯಾಗಿವೆ. ಸೋಮವಾರ 5 ನಾಮಪತ್ರ ಸಲ್ಲಿಕೆಯಾಗಿದ್ದು, ಒಟ್ಟಾರೆ 32 ನಾಮಪತ್ರ ಸಲ್ಲಿಸಿದಂತಾಗಿದೆ ಎಂದು ಚುನಾವಣಾಧಿಕಾರಿ ಬಸಲಿಂಗಪ್ಪ ಡಿಗ್ಗಿ ತಿಳಿಸಿದ್ದಾರೆ.

ಆ.6ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ.8 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.