ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಶತಪ್ರಯತ್ನ: ಪ್ರಿಯಾಂಕ್ ಖರ್ಗೆ

7

ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಶತಪ್ರಯತ್ನ: ಪ್ರಿಯಾಂಕ್ ಖರ್ಗೆ

Published:
Updated:
Deccan Herald

ಕಲಬುರ್ಗಿ: ‘ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಶತಪ್ರಯತ್ನ ಮಾಡುತ್ತಿದೆ. ಆದರೆ, ಅವರ ಕನಸು ನನಸಾಗುವುದಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಚಿಂಚೋಳಿ ಕಾಂಗ್ರೆಸ್ ಶಾಸಕ ಡಾ.ಉಮೇಶ ಜಾಧವ ಅವರನ್ನು ಬಿಜೆಪಿ ಸಂಪರ್ಕಿಸಿರುವ ಕುರಿತು ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಜಾಧವ ಅವರಿಗೆ ಸಚಿವ ಸ್ಥಾನದ ಆಮಿಷವೊಡ್ಡಿರಬಹುದು. ಇಲ್ಲವೇ ಸಹಜವಾಗಿಯೂ ಮಾತನಾಡಿರಬಹುದು. ಯಡಿಯೂರಪ್ಪನವರು ಹೇಗಾದರೂ ಮಾಡಿ ಸರ್ಕಾರ ರಚನೆ ಮಾಡಬೇಕು, ಮುಖ್ಯಮಂತ್ರಿ ಆಗಬೇಕು ಎಂದು ಹೊರಟಿದ್ದಾರೆ. ಏನಾಗುತ್ತದೆ ಎಂದು ನೋಡೋಣ’ ಎಂದರು.

‘ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿರುವ ಬಗ್ಗೆ ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲೇ ಯಡಿಯೂರಪ್ಪನವರು ಒಪ್ಪಿಕೊಂಡಿದ್ದಾರೆ. ಆದರೆ, ಅವರ ಪ್ರಯತ್ನ ಈಡೇರುವುದಿಲ್ಲ’ ಎಂದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !