ಕಲಬುರಗಿ: ‘ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ಅಮೆರಿಕದಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ತೆಗೆಯುವ ಹೇಳಿಕೆ ನೀಡಿದ್ದನ್ನು ಖಂಡಿಸುತ್ತೇವೆ’ ಎಂದು ಬಿಜೆಪಿ ಒಬಿಸಿ ಮೋರ್ಚಾ ಸದಸ್ಯತ್ವ ಜಿಲ್ಲಾ ಸಂಚಾಲಕ ಬಸವರಾಜ ಮದ್ರಿಕಿ ತಿಳಿಸಿದರು.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ರಾಹುಲ್ ಅವರ ಹೇಳಿಕೆಯನ್ನು ಬಿಜೆಪಿ ಒಬಿಸಿ ಮೋರ್ಚಾ ಖಂಡಿಸುತ್ತದೆ. ಕಾಂಗ್ರೆಸ್‌ನ ದಲಿತ ವಿರೋಧಿ ನಿಲುವು ಮತ್ತೊಮ್ಮೆ ಬಹಿರಂಗಗೊಂಡಿದೆ’ ಎಂದರು.
‘ದೇಶದಲ್ಲಿ ಸೆ.2ರಿಂದ ಆರಂಭವಾಗಿರುವ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನದ ಭಾಗವಾಗಿ ಪ್ರತಿ ಬೂತಮಟ್ಟದಲ್ಲಿ 400 ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ. ಪ್ರತಿ ವಿಧಾನಸಭೆಗೆ ಹತ್ತು ಸಾವಿರ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ’ ಎಂದು
‘ಬಿಜೆಪಿಗೆ ಕಾರ್ಯಕರ್ತರೇ ಬುನಾದಿ. ಕಾರ್ಯಕರ್ತರ ಆಧಾರಿತ ಪಕ್ಷ. ಪತ್ರಿ ಆರು ವರ್ಷಗಳಿಗೊಮ್ಮೆ ಸದಸ್ಯತ್ವ ಅಭಿಯಾನ ನಡೆಸಲಾಗುತ್ತದೆ. ನಿಗದಿತ ದೂರವಾಣಿಗೆ ಮಿಸ್ ಕಾಲ್ ನೀಡುವ ಮೂಲಕ ಸದಸ್ಯತ್ವ ಪಡೆಯಬಹುದು’ ಎಂದರು.