ಕಲಬುರಗಿ: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಬಿಜೆಪಿ ಮುಖಂಡ ಧರ್ಮಣ್ಣ ದೊಡ್ಡಮನಿ (58) ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಅವರಿಗೆ ಹೃದಯಾಘಾತವಾಯಿತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದರು.

ಅವರಿಗೆ ಪತ್ನಿ ಇದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. 1994ರಲ್ಲಿ ಧರ್ಮಣ್ಣ ಅವರು ಪಕ್ಷದ ಅಭ್ಯರ್ಥಿಯಾಗಿ ಜೇವರ್ಗಿ ಮತಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಎದುರು ಸ್ಪರ್ಧಿಸಿದ್ದರು.

ಕೆಲ ತಿಂಗಳ ಹಿಂದೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಧರ್ಮಣ್ಣ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಆಗಿನಿಂದಲೂ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಂಡಿರಲಿಲ್ಲ.

ಅಂತ್ಯಕ್ರಿಯೆ ಸ್ವಗ್ರಾಮ ಜೇವರ್ಗಿ ತಾಲ್ಲೂಕಿನ ಗಂವಾರದಲ್ಲಿ ಸಂಜೆ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.