ಕಲಬುರಗಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ. ರವಿ ಅವರು ನಗರದ ಹೋಟೆಲ್ನಲ್ಲಿ ಮಂಗಳವಾರ ಕಲಬುರಗಿ ವಿಭಾಗೀಯ ಮಟ್ಟದ ಪಕ್ಷದ ಪದಾಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿ ಚುನಾವಣಾ ಕಾರ್ಯತಂತ್ರ, ಪಕ್ಷ ಸಂಘಟನೆ ಹಾಗೂ ಇತರೆ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.

ಕಲಬುರಗಿ ಜಿಲ್ಲೆಯ ನಾಯಕರಲ್ಲಿ ಇರುವ ಭಿನ್ನಮತ ಶಮನಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಈಚೆಗೆ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಂಡಿದ್ದ ಸಮಾರೋಪ ಸಮಾರಂಭದಲ್ಲಿ ಬಹುತೇಕ ಶಾಸಕರು, ನಾಯಕರು ಗೈರಾಗಿದ್ದರು. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಸಿ.ಟಿ. ರವಿ ಅವರು ಕಲಬುರಗಿ ನಗರ ಮತ್ತು ಗ್ರಾಮೀಣ, ಯಾದಗಿರಿ ಹಾಗೂ ಬೀದರ್ ಜಿಲ್ಲಾ ಘಟಕಗಳ ಮುಖಂಡರ ಮತ್ತು ಜನಪ್ರತಿನಿಧಿಗಳೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ.

‘ಪಕ್ಷದ ಕೆಲವು ನಾಯಕರ ನಡುವೆ ಒಂದಿಷ್ಟು ಭಿನ್ನಾಭಿಪ್ರಾಯಗಳು ಉಂಟಾಗಿದೆ. ಅದನ್ನು ಶಮನಗೊಳಿಸಲು ಸಭೆಯಲ್ಲಿ ಪ್ರಯತ್ನಿಸಲಾಯಿತು. ಚುನಾವಣೆಯ ಹೊಸ್ತಿಲಲ್ಲಿ ಇದು ಒಳ್ಳೆಯ ನಡೆಯಲ್ಲ. ಎಲ್ಲರೂ ಒಂದಾಗಿರಲು’ ಎಂದು ಮೂಲಗಳು ತಿಳಿಸಿವೆ.

‘ವಿಧಾನಸಭೆ ಚುನಾವಣೆ ಸ್ಪರ್ಧೆಗೆ ಇಚ್ಛಿಸಿರುವ ಟಿಕೆಟ್ ಆಕಾಂಕ್ಷೆಗಳ ಹೆಸರು ಪಡೆದಿದ್ದಾರೆ. ಪ್ರತಿ ಕ್ಷೇತ್ರದಲ್ಲಿ ಬಿಜೆಪಿಯ ಬಲ ಹಾಗೂ ನ್ಯೂನತೆಗಳೇನು ಎಂಬುದರ ಮಾಹಿತಿ ಕಲೆ ಹಾಕಿದ್ದಾರೆ. ಕ್ಷೇತ್ರಗಳಲ್ಲಿನ ಈಗಿನ ವಾತಾವರಣ ತಿಳಿದುಕೊಂಡಿದ್ದು, ಕ್ಷೇತ್ರದ ಗೆಲುವಿಗೆ ಏನೆಲ್ಲ ತಂತ್ರಗಳು ರೂಪಿಸಬಹುದು ಎಂಬುದರ ಕುರಿತಾಗಿಯೂ ಚರ್ಚಿಸಿದ್ದಾರೆ’ ಎಂದು ತಿಳಿದುಬಂದಿದೆ.

‘ನಾಯಕರು ನಡುವೆ ಏನೇ ಭಿನ್ನಾಭಿಪ್ರಾಯಗಳು ಇದ್ದರೂ ಒಂದಡೆ ಕುಳಿತು ಬಗೆಹರಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಭಿನ್ನಮತ ಕಾಣಬಾರದು. ಅದು ಇಲ್ಲಿಗೆ ಕೊನೆ ಆಗಬೇಕು. ಜಿಲ್ಲೆಯ ಮೇಲೆ ಹೈ ಕಮಾಂಡ್ ಕಣ್ಣಿಟ್ಟಿದ್ದು, ಇದು ಹೀಗೆ ಮುಂದುವರಿದರೆ ಕಠಿಣ ಕ್ರಮ ತೆಗೆದು ಕೊಳ್ಳಲಾಗುವುದು ಎಂಬ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ’ ಎಂದಿದ್ದಾರೆ.

‘ಚುನಾವಣೆಯಲ್ಲಿ ಗೆಲ್ಲುವ ಗುರಿ ಇರಿಸಿಕೊಂಡು ಪಕ್ಷ ಸಂಘಟಿಸಬೇಕು. ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಕೊಟ್ಟರೂ ಎಲ್ಲರೂ ಒಗ್ಗೂಡಿ ಶ್ರಮಿಸುವಂತೆ ಸಲಹೆ ನೀಡಿದ್ದಾರೆ’ ಎಂದು ಮೂಲಗಳು ಹೇಳಿವೆ.

ಚಿತ್ತಾಪುರನತ್ತ ಕಮಲದ ಚಿತ್ತ

ಕಲಬುರಗಿ ಗ್ರಾಮೀಣ ಘಟಕದ ಪದಾಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಗ್ಗೆ ಹೆಚ್ಚಾಗಿ ಪ್ರಸ್ತಾಪಿಸಲಾಗಿದೆ.

‘ಕ್ಷೇತ್ರದಲ್ಲಿ ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರೂ ಪಕ್ಷದ ಅಭ್ಯರ್ಥಿ ಗೆಲುವಿಗೆ ಒಂದಾಗಿ ಕೆಲಸ ಮಾಡಬೇಕು. ಬಿಜೆಪಿ ಪರವಾದ ಅಲೆ ಕಂಡುಬರುತ್ತಿದೆ, ಅದನ್ನು ಮತಗಳಾಗಿ ಪರಿವರ್ತನೆ ಮಾಡಿಕೊಳ್ಳಬೇಕು. ಆಯಾ ಕ್ಷೇತ್ರಗಳ ಮುಖಂಡರು ಗೆಲುವಿಗಾಗಿ ಯೋಜನೆಗಳನ್ನು ರೂಪಿಸಬೇಕು’ ಎಂದು ಸಲಹೆ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ವಿದ್ಯಾರ್ಥಿಗಳ ಜತೆ ಸಂವಾದ ಇಂದು

ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಬುಧವಾರ(ಮಾ.15) ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರದ ರಾಜ್ಯ ಖಾತೆ ಸಚಿವ ವಿ.ಕೆ. ಸಿಂಗ್ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.

ಬೆಳಿಗ್ಗೆ 11.20ಕ್ಕೆ ನಡೆಯುವ ಸಂವಾದದಲ್ಲಿ ‘ಯುವ ಭಾರತ’ದ ಕುರಿತು ಸುಮಾರು 400 ವಿದ್ಯಾರ್ಥಿಗಳು ಹಾಗೂ 100 ಬೋಧಕರೊಂದಿಗೆ ಸಂವಾದ ನಡೆಸುವರು ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ.

ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷೆ ಡಿ.ಕೆ.ಅರುಣಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ನಗರ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಬಿ.ಜಿ.ಪಾಟೀಲ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಪ್ರಧಾನ ಕಾರ್ಯದರ್ಶಿ ಉಮೇಶ್ ಪಾಟೀಲ, ಮುಖಂಡರಾದ ದಯಾಘನ್ ಧಾರವಾಡಕರ್, ಮಹಾದೇವ ಬೆಳಮಗಿ ಸೇರಿ ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.