ಬುಧವಾರ, ಆಗಸ್ಟ್ 4, 2021
21 °C
ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷೆ ಲಲಿತಾ

ಪಕ್ಷದ ಸಂಘಟನೆಗೆ ಮಹಿಳೆಯರು ಮುಂದಾಗಲಿ: ಲಲಿತಾ ಅನ್ನಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ರಾಜ್ಯದ ಉದ್ದಗಲಕ್ಕೂ ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಮಹಿಳೆಯರು, ಪಕ್ಷ ನೀಡಿದ ಜವಾಬ್ದಾರಿಗೆ ಬದ್ದರಾಗಿ ಕಾರ್ಯವನ್ನು ನಿರ್ವಹಣೆ ಮಾಡಬೇಕಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಲಲಿತಾ ಅನ್ನಪೂರ್ಣ ಹೇಳಿದರು.

ಗುರುವಾರ ಪಕ್ಷದ ಕಚೇರಿಯಲ್ಲಿ ಮಹಾನಗರದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ‘ನಿಮಗೆ ನೀಡಿದ ಜವಾಬ್ದಾರಿಯನ್ನ ಮೊದಲ ಅರಿತುಕೊಳ್ಳಿ. ನಂತರ ಪಕ್ಷ ಸಂಘಟನಗೆ ಮುಂದಾಗಿ. ವ್ಯಕ್ತಿಗೆ ಪ್ರಾಮುಖ್ಯತೆ ನೀಡದೇ, ಸಂಘಟನೆಗೆ ಅತಿ ಹೆಚ್ಚು ಪ್ರಾಮುಖ್ಯತೆ ನೀಡುವ ಏಕೈಕ ಪಕ್ಷ ಬಿಜೆಪಿಯಾಗಿದೆ’ ಎಂದು ಅವರು ಹೇಳಿದರು.

‘ನಾರಿ ಶಕ್ತಿ, ಮೀಸಲಾತಿ ಬಗ್ಗೆ ಕೇಳುವವರು ನಾವು, ಮನೆಯಲ್ಲಿ ಕುಳಿತರೆ ಸಂಘಟನೆಯಾಗಲಾರದು. ಪಕ್ಷದ ಸಂಘಟನೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ನೀಡಿದ ಕೆಲಸ ಹಾಗೂ ಸರ್ಕಾರದ ಅನೇಕ ಮಹಿಳೆಯ ಪರವಿರುವ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕಾರ್ಯವನ್ನು ಮಹಿಳೆಯರು ಮಾಡಬೇಕಾಗಿದೆ’ ಎಂದು ಹೇಳಿದರು.

‘ಮುಂಬರುವ ದಿನಗಳಲ್ಲಿ ಮಹಿಳಾ ಮೋರ್ಚಾ ಘಟಕದ ವತಿಯಿಂದ ರಾಜ್ಯದಾದ್ಯಂತ ಅಗಸ್ಟ್ 7ರಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಮಾಡಬೇಕಾಗಿದೆ. ಅದರ ಜೊತೆಗೆ ಸ್ವಾತಂತ್ರ್ಯ ದಿನಾಚರಣೆ ಹಾಗೂ ಅಗಸ್ಟ್ 22ರಿಂದ ಒಂದು ವಾರಗಳ ಕಾಲ ರಕ್ಷಾ ಬಂಧನ ಕಾರ್ಯಕ್ರಮವನ್ನು ಮಾಡುವ ಮೂಲಕ ಸಹೋದರತ್ವ ಬೆಳೆಸುವ ಕಾರ್ಯವು ಮಹಿಳಾ ಮೋರ್ಚಾ ವತಿಯಿಂದ ನಡೆಯಬೇಕಿದೆ’ ಎಂದು ತಿಳಿಸಿದರು.

ಕಾರ್ಯಕ್ರಮದ ಉದ್ಘಾಟನೆ ಸಂದರ್ಭದಲ್ಲಿ ಪಾರ್ಥನೆ ಗೀತೆಯನ್ನು ಸವಿತಾ ಪಾಟೀಲ ಹಾಡಿದರು. ಮಹಾದೇವ ಬೆಳಮಗಿ ಮಾತನಾಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿತಾ, ಶೋಭಾ, ಸುವರ್ಣ ವಾಡೆ, ಸೇರಿದಂತೆ ವಿವಿಧ ಮಹಿಳಾ ಮೋರ್ಚಾ ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು