ಮಂಗಳವಾರ, ಜನವರಿ 21, 2020
21 °C
ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕಕ್ಕೆ ನೇಮಕ

ಜಿ.ಪಂ. ಸದಸ್ಯ ರದ್ದೇವಾಡಗಿಗೆ ಒಲಿದ ಅಧ್ಯಕ್ಷ ಹುದ್ದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಜಿಲ್ಲಾ ಪಂಚಾಯಿತಿ ಸದಸ್ಯ ಶಿವರಾಜ ಪಾಟೀಲ ರದ್ದೇವಾಡಗಿ ಅವರನ್ನು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ. ನಿಕಟಪೂರ್ವ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರು ಪಕ್ಷದ ಧ್ವಜವನ್ನು ರದ್ದೇವಾಡಗಿ ಅವರಿಗೆ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಸ್ತಾಂತರಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರು ನೂತನ ಅಧ್ಯಕ್ಷರ ಹೆಸರನ್ನು ಘೋಷಿಸಿದರು.

ಹೆಸರು ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ ಪಾಟೀಲ, ‘ಪ್ರಧಾನಿ ನರೇಂದ್ರ ಮೋದಿ ಅವರ ಆಶಯದ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಘೋಷಣೆಯಂತೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಲು ಪ್ರಯತ್ನಿಸುವೆ. ಗ್ರಾಮಾಂತರ ಭಾಗದಲ್ಲಿ ಪಕ್ಷದ ಸಂಘಟನೆಗೆ ಗಮನ ಹರಿಸುವೆ. ಜಿಲ್ಲೆಯನ್ನು ಕಾಂಗ್ರೆಸ್‌ ಮುಕ್ತ ಮಾಡಲು ಸಂಕಲ್ಪ ತೊಡುವೆ’ ಎಂದರು.

ಸಂಸದ ಡಾ.ಉಮೇಶ ಜಾಧವ್, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಸುಭಾಷ್‌ ಗುತ್ತೇದಾರ, ರಾಜಕುಮಾರ ಪಾಟೀಲ ತೇಲ್ಕೂರ, ಬಿ.ಜಿ.ಪಾಟೀಲ ಈ ಸಂದರ್ಭದಲ್ಲಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು