ಕಲಬುರಗಿ: 2022ರಲ್ಲಿ ಆಳಂದದ ಲಾಡ್ಲೆ ಮಶಾಕ್ ದರ್ಗಾದ ಆವರಣದ ರಾಘವ ಚೈತನ್ಯ ಶಿವಲಿಂಗದ ಶುದ್ಧೀಕರಣದ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ಮುಸ್ಲಿಮರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಖಂಡಿಸಿ ಬಿಜೆಪಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿತು.

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ತಮಟೆಗಳನ್ನು ಬಾರಿಸುತ್ತ ಜಿಲ್ಲಾಧಿಕಾರಿ ಕಚೇರಿ ತನಕ ಪ್ರತಿಭಟನಾ ರ್ಯಾಲಿ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಮಾಜಿ ಸಂಸದ ಡಾ.ಉಮೇಶ ಜಾಧವ, ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ದತ್ತಾತ್ರೇಯ ಪಾಟೀಲ ರೇವೂರ, ಮುಖಂಡರಾದ ಹರ್ಷಾನಂದ ಗುತ್ತೇದಾರ, ಶಿವರಾಜ ಪಾಟೀಲ ರದ್ದೇವಾಡಗಿ ಸೇರಿದಂತೆ ಹಾಲಿ–ಮಾಜಿ ಜನಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.