ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ತಾಪುರ: ಮಣಿಕಂಠ ರಾಠೋಡ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ನಾಳೆ

Published 27 ಆಗಸ್ಟ್ 2023, 15:50 IST
Last Updated 27 ಆಗಸ್ಟ್ 2023, 15:50 IST
ಅಕ್ಷರ ಗಾತ್ರ

ಚಿತ್ತಾಪುರ: ‘ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಿ, ಮಾನಸಿಕ ಕಿರುಕುಳ ನೀಡುತ್ತಿರುವ ಸರ್ಕಾರ ಮತ್ತು ಪೊಲೀಸ್ ಇಲಾಖೆ ವಿರುದ್ಧ ಆಗಸ್ಟ್ 28 ರಂದು ಪಟ್ಟಣದಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ನೀಲಕಂಠ ಪಾಟೀಲ್ ತಿಳಿಸಿದರು.

ಪಟ್ಟಣದಲ್ಲಿ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ‘ಕಲಗುರ್ತಿ ಗ್ರಾಮದಲ್ಲಿ ದೇವಾನಂದ ಎಂಬ ಯುವಕನ ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಬೇಕು ಎಂದು ಮಣಿಕಂಠ ಅವರು ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದ್ದಕ್ಕೆ ಅವರ ವಿರುದ್ಧ ಪ್ರಕರಣ ದಾಖಲಿಸುವುದು ನ್ಯಾಯವೇ? ಸರ್ಕಾರ ಮತ್ತು ಪೊಲೀಸ್ ಇಲಾಖೆ ಮಣಿಕಂಠ ಅವರಿಗೆ ವಿನಾಃ ಕಾರಣ ತೊಂದರೆ ಕೊಡುತ್ತಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

‘ಪ್ರತಿಭಟನೆಯಲ್ಲಿ ಐದು ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮುಖಂಡರು, ತಾಲ್ಲೂಕು ಮುಖಂಡರು, ಜನಪ್ರತಿನಿಧಿಗಳು ಪಾಲ್ಗೊಳಲಿದ್ದಾರೆ. ಪಟ್ಟಣದ ಅಕ್ಕಮಹಾದೇವಿ ಮಂದಿರದಿಂದ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಮೆರವಣಿಗೆ ಶುರುವಾಗಿ ಪ್ರಮುಖ ಬೀದಿಗಳ ಮೂಲಕ ತಹಶೀಲ್ದಾರ್ ಕಚೇರಿವರೆಗೆ ನಡೆಯಲಿದೆ’ ಎಂದು ಅವರು ಹೇಳಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಪುರಸಭೆ ಸದಸ್ಯ ನಾಗರಾಜ ಭಂಕಲಗಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಚವಾಣ್, ನಾಗರಾಜ ಹೂಗಾರ, ಮುಖಂಡರಾದ ಶರಣಪ್ಪ ಸಣಮೊ, ಕೋಟೇಶ್ವರ ರೇಷ್ಮಿ, ಶ್ರೀಕಾಂತ ಸುಲೇಗಾಂವ್, ನಾಗುಬಾಯಿ ಜಿತುರೆ, ಅಕ್ಕಮಹಾದೇವಿ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT