ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು: ಶಿವರಾಜ್‌ ಸಿಂಗ್ ಚೌಹಾಣ್‌

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ವಿಶ್ವಾಸ
Published 21 ಫೆಬ್ರುವರಿ 2024, 15:27 IST
Last Updated 21 ಫೆಬ್ರುವರಿ 2024, 15:27 IST
ಅಕ್ಷರ ಗಾತ್ರ

ಸೇಡಂ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು ಖಚಿತ. ದೇಶದಲ್ಲಿ ಸುಮಾರು 412 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ’ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್ ಚೌಹಾಣ್‌ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಬಿಜೆಪಿ ತಾಲ್ಲೂಕು ಘಟಕ ಬುಧವಾರ ಆಯೋಜಿಸಿದ್ದ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಲಬುರಗಿ ಸಂಸದ ಡಾ.ಉಮೇಶ ಜಾಧವ ಕಳೆದ ಬಾರಿ ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಅವರ ಚುನಾವಣಾ ಪ್ರಚಾರದಲ್ಲಿ ನಾನೂ ಭಾಗಿಯಾಗಿದ್ದೆ. ಈ ಬಾರಿ 5 ಲಕ್ಷ ಮತಗಳ ಅಂತರದಿಂದ ಗೆಲ್ಲಲಿ’ ಎಂದು ಹಾರೈಸಿದರು. ‘ದೇಶದಲ್ಲಿ ಮೋದಿ ಅಧಿಕಾರಕ್ಕೆ ಬರುವ ಮುನ್ನ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ಅವರು ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ನಿಂತಿದೆ. ಭಾರತ ವಿಶ್ವಗುರುವಾಗುತ್ತಿದೆ. 2014ರಲ್ಲಿ 17, 2019ರಲ್ಲಿ 25 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಾಗಿತ್ತು. 2024ರಲ್ಲಿ 28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವುದು ನಿಶ್ಚಿತ’ ಎಂದರು.

‘ಬಿಜೆಪಿಯಲ್ಲಿ ಪ್ರತಿಯೊಬ್ಬ ಕಾರ್ಯಕರ್ತನೂ ನಾಯಕನೇ. ಈ ಪಕ್ಷದಲ್ಲಿ ಸಾಮಾನ್ಯನೂ ಕೂಡ ಪ್ರಧಾನ ಮಂತ್ರಿಯಾಗುತ್ತಾನೆ. ರೈತನ ಮಗನಾದ ನನಗೆ ನಾಲ್ಕು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿ ಅತಂತ್ರದಲ್ಲಿದ್ದಾರೆ. ನಿತ್ಯವೂ ಓಡುತ್ತಲೇ ಇದ್ದಾರೆ. ಅವರ ನಾಯಕತ್ವದಲ್ಲಿ ಶಕ್ತಿನೇ ಇಲ್ಲ. ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವ ಪರಿಸ್ಥಿತಿಗೆ ಕಾಂಗ್ರೆಸ್ ಬಂದಿದೆ’ ಎಂದು ಕುಟುಕಿದರು.

ಸಂಸದ ಡಾ.ಉಮೇಶ ಜಾಧವ ಮಾತನಾಡಿ, ‘ಸಬ್‌ಕಾ ಸಾತ್ ಸಬ್‌ಕಾ ವಿಕಾಸ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮುಖ್ಯ ಉದ್ದೇಶವಾಗಿದ್ದು, ಅವರ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಂತಹ ಕೆಲಸವನ್ನು ಕಾರ್ಯಕರ್ತರು ಮಾಡಬೇಕಿದೆ. ಪ್ರತಿಯೊಬ್ಬರೂ ಹೈಕಮಾಂಡ್‌ನ ನಿರ್ದೇಶನದ ಪ್ರಕಾರ ಕೆಲಸ ಮಾಡುತ್ತಿದ್ದು, ಮತ್ತೊಮ್ಮೆ ಮೋದಿ ಅವರನ್ನು ಗೆಲ್ಲಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಬಸವರಾಜ ಮತ್ತಿಮೂಡ, ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ಶಿವರಾಜ ಪಾಟೀಲ ರದ್ದೇವಾಡಗಿ, ಶೋಭಾ ಬಾಣಿ, ಪರ್ವತರೆಡ್ಡಿ ಪಾಟೀಲ, ಓಂಪ್ರಕಾಶ ಪಾಟೀಲ ತರನಳ್ಳಿ, ಅಶೋಕ ಬಗಲಿ ಪಾಲ್ಗೊಂಡಿದ್ದರು.

ಸೇಡಂ ಪಟ್ಟಣದಲ್ಲಿ ಬುಧವಾರ ನಡೆದ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಚಾಲನೆ ನೀಡಿ ಮಾತನಾಡಿದರು
ಸೇಡಂ ಪಟ್ಟಣದಲ್ಲಿ ಬುಧವಾರ ನಡೆದ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಚಾಲನೆ ನೀಡಿ ಮಾತನಾಡಿದರು

Highlights - ಸೇಡಂ; ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಚಾಲನೆ

Quote - ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಪಕ್ಷ ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್‌ ಸಂಪೂರ್ಣ ನೆಲಕಚ್ಚಲಿದ್ದು ಇದಕ್ಕೆ ರಾಹುಲ್ ಗಾಂಧಿ ಸಾಕ್ಷಿಯಾಗಲಿದ್ದಾರೆ. ಶಿವರಾಜ್‌ ಸಿಂಗ್ ಚೌಹಾಣ್‌ ಮಾಜಿ ಮುಖ್ಯಮಂತ್ರಿ ಮಧ್ಯಪ್ರದೇಶ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT