ಮಂಗಳವಾರ, ಜೂನ್ 22, 2021
29 °C

ಕಲಬುರ್ಗಿ ಜಿಲ್ಲೆಯಲ್ಲಿ ಇಬ್ಬರ ಸಾವು: ಬ್ಲ್ಯಾಕ್‌ ಫಂಗಸ್ ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯ ಇಬ್ಬರು ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕ ಬಹುಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ. ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಬ್ಲ್ಯಾಕ್‌ ಫಂಗಸ್‌ ಇರಬಹುದು ಎಂದು ಶಂಕಿಸಿದ್ದಾರೆ.

ಕಾನ್‌ಸ್ಟೆಬಲ್‌ವೊಬ್ಬರು ಕಲಬುರ್ಗಿಯಲ್ಲಿ ಹಾಗೂ ಯಾದಗಿರಿಯಲ್ಲಿ ಉಪನ್ಯಾಸಕರಾಗಿದ್ದ ಇನ್ನೊಬ್ಬರು ಸೊಲ್ಲಾಪುರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

‘ಈ ಸಾವುಗಳಿಗೆ ಬ್ಲ್ಯಾಕ್‌ ಫಂಗಸ್‌ ಕಾರಣ ಎಂಬುದು ಖಚಿತವಾಗಿಲ್ಲ. ಪ್ರಯೋಗಾಲಯದ ವರದಿ ನಿರೀಕ್ಷಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ 12 ಮಂದಿಗೆ ಬ್ಲ್ಯಾಕ್‌ ಫಂಗಸ್
ಹುಬ್ಬಳ್ಳಿ:
ಕೋವಿಡ್‌ನಿಂದ ಚೇತರಿಸಿಕೊಂಡ 12 ಜನರಲ್ಲಿ ಶಿಲೀಂಧ್ರ ಸೋಂಕು (ಬ್ಲ್ಯಾಕ್‌ ಫಂಗಸ್) ಕಾಣಿಸಿಕೊಂಡಿದೆ. ಅವರೆಲ್ಲ ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿನಿಂದ ಚೇತರಿಸಿಕೊಂಡು ಮನೆಗೆ ತೆರಳಿದವರಲ್ಲಿ ಶಿಲೀಂಧ್ರ ಸೋಂಕಿನ ಲಕ್ಷಣಗಳು ಕಾಣಿಸಿವೆ. ಅವರು ಆರಂಭದಲ್ಲೇ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಕಿಮ್ಸ್‌ನ ಇಎನ್‌ಟಿ ವಿಭಾಗದ ಮುಖ್ಯಸ್ಥ ಡಾ.ರವೀಂದ್ರ ಗದಗ ‘ಪ್ರಜಾವಾಣಿ’ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು