ಬುಧವಾರ, ಮಾರ್ಚ್ 22, 2023
28 °C
ಕೇಂದ್ರ ಕಾರಾಗೃಹದಲ್ಲಿ ರಕ್ತದಾನ ಶಿಬಿರ: ನ್ಯಾಯಾಧೀಶ ಸುಶಾಂತ ಚೌಗಲೆ ಹೇಳಿಕೆ

ಕಲಬುರಗಿ: ‘ರಕ್ತದಾನ ಮಾಡಿ ಜೀವ ಉಳಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ‘ರಕ್ತದಾನ ಮಾಡುವುದರಿಂದ ವ್ಯಕ್ತಿಯೊಬ್ಬನ ಜೀವ ಉಳಿಸಿದಂತಾಗುತ್ತದೆ. ರಕ್ತದಾನ ಮಾಡಿದಲ್ಲಿ ಜೀವ ಉಳಿಸಿದ ಪುಣ್ಯ ನಿಮ್ಮದಾಗಲಿದೆ’ ಎಂದು ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸುಶಾಂತ್ ಎಂ. ಚೌಗಲೆ ಹೇಳಿದರು.

ವಿಶ್ವ ರಕ್ತದಾನ ದಿನಾಚರಣೆ ಪ್ರಯುಕ್ತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ರಕ್ತ ನಿಧಿ ಕೇಂದ್ರ, ಜಿಮ್ಸ್ ಆಸ್ಪತ್ರೆ ಹಾಗೂ ಕೇಂದ್ರ ಕಾರಾಗೃಹ ಸಹಯೋಗದಲ್ಲಿ ಕೇಂದ್ರ ಕಾರಾಗೃಹದಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಸರ್ಜನ್ ಡಾ. ಅಂಬಾರಾಯ ಎಸ್. ರುದ್ರವಾಡಿ ಮಾತನಾಡಿ, ‘ಒಬ್ಬ ವ್ಯಕ್ತಿ ನೀಡಿದ ರಕ್ತ 4 ಜನರಿಗೆ ಉಪಯೋಗವಾಗುತ್ತದೆ. ಆರೋಗ್ಯವಂತ ವ್ಯಕ್ತಿ 6 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತ ನೀಡುವುದರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ’ ಎಂದರು.

ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್. ರಮೇಶ್, ‘ರಕ್ತದಾನ ಮಹಾದಾನ. ವಿಜ್ಞಾನ ಎಷ್ಟೇ ಮುಂದುವರೆದರೂ, ರಕ್ತಕ್ಕೆ ಪರ್ಯಾಯವಾಗಿ ಕಲ್ಪಿಸಲು ಸಾಧ್ಯವಾಗಿಲ್ಲ. ಸಾವಿನಂಚಿನಲ್ಲಿರುವ ವ್ಯಕ್ತಿಗೆ ರಕ್ತದಾನ ಜೀವ ಉಳಿಸಲಿದೆ’ ಎಂದರು.

 ಕಾರಾಗೃಹದ ಸಹಾಯಕ ಅಧೀಕ್ಷಕ ವಿ. ಕೃಷ್ಣಮೂರ್ತಿ, ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಬನ್ನೇರಿ, ಹಿರಿಯ ವೈದ್ಯಾಧಿಕಾರಿ ಡಾ. ಬಸವರಾಜ ಕಿರಣಗಿ, ರಕ್ತ ನಿಧಿ ಕೇಂದ್ರದ ಡಾ. ಮಹ್ಮದ್ ಅಬ್ದುಲ್ ಸಮಿ, ಡಾ. ಅಣ್ಣಾರಾವ ಪಾಟೀಲ, ಮಲ್ಲಿಕಾರ್ಜುನ ಪರೀಟ್, ಕೆ. ಮರನೂರು ಸೇರಿದಂತೆ ಕಾರಾಗೃಹ ಮತ್ತು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಹಾಗೂ ಜೈಲರ್ ವೃಂದದವರು ಇದ್ದರು. ಆಪ್ತ ಸಮಾಲೋಚಕಿ ಸುಗಲಾ ರಾಣಿ, ಶಿಕ್ಷಕ ನಾಗರಾಜ ಮೂಲಗೆ, ರುದ್ರವ್ವ ಇದ್ದರು. ಸುಮಾರು 48 ಜನ ಅಧಿಕಾರಿ, ಸಿಬ್ಬಂದಿ ವರ್ಗದವರು ರಕ್ತದಾನ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು