ಗುರುವಾರ , ಮೇ 26, 2022
30 °C

ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಶರಣಬಸವೇಶ್ವರ ಕೆರೆಯಲ್ಲಿ ಶನಿವಾರ ಮೀನು ಹಿಡಿಯಲು ಹೋದ 16 ವರ್ಷದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಇಬ್ಬರು ಬಾಲಕರು ಮೀನು ಹಿಡಿಯಲು ಕೆರೆಗೆ ಇಳಿದಿದ್ದರು. ಆಳಕ್ಕೆ ಹೋದಾಗ ಒಬ್ಬ ಬಾಲಕ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಇನ್ನೊಬ್ಬ ಬಾಲಕ ಪರಾರಿಯಾಗಿದ್ದಾನೆ. ಇದೇ ಸಂದರ್ಭದಲ್ಲಿ ಪಾದಚಾರಿಗಳು ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ಕಂಡು, ರಕ್ಷಿಸಲು ಮುಂದಾದರು. ಆದರೂ ಪ್ರಯತ್ನ ಫಲ ನೀಡಲಿಲ್ಲ. ನೋಡನೋಡಿತ್ತಿದ್ದಂತೆಯೇ ಜನರ ಕಣ್ಣ ಮುಂದೆಯೇ ಬಾಲಕ ಜಲಸಮಾಧಿಯಾದ.

ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಮತ್ತು ಎಸ್.ಡಿ.ಆರ್.ಎಫ್ ತಂಡದವರು ಶವವನ್ನು ಮೇಲಕ್ಕೆತ್ತಿದರು. ಬಾಲಕನ ಗುರುತು ಪತ್ತೆಯಾಗಿಲ್ಲ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.