ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕ್ಷಿಪ್ತ ಸುದ್ದಿ: ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ

Last Updated 4 ಡಿಸೆಂಬರ್ 2020, 16:56 IST
ಅಕ್ಷರ ಗಾತ್ರ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ

ಕಲಬುರ್ಗಿ: ‘ಆತ್ಮ’ ಯೋಜನೆಯಡಿ 2020-21ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಗುಂಪು ಪ್ರಶಸ್ತಿ, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗಾಗಿ ಜಿಲ್ಲೆಯ ಏಳು ತಾಲ್ಲೂಕುಗಳ ರೈತರಿಂದ ನಾಮನಿರ್ದೇಶನ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೆಶಕರು ತಿಳಿಸಿದ್ದಾರೆ.

ಶ್ರೇಷ್ಠ ಗುಂಪು ಪ್ರಶಸ್ತಿಗಾಗಿ ಆಸಕ್ತ ಗುಂಪು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ರೈತರ ಉನ್ನತಿಗಾಗಿ ಕೆಲಸ ಮಾಡುತ್ತಿರಬೇಕು. ಕಳೆದ ಮೂರು ವರ್ಷಗಳಲ್ಲಿ ಕೃಷಿ ಇಲ್ಲವೇ ಕೃಷಿ ಸಂಬಂಧಿತ ಇಲಾಖೆಗಳಿಂದ ಸಂಯೋಜಿತವಾಗಿ ಅವುಗಳ ಸವಲತ್ತುಗಳನ್ನು ಪಡೆದುಕೊಂಡಿರಬೇಕು. ಆಸಕ್ತ ಗುಂಪುಗಳು ಯಾವುದೇ ರೀತಿಯ ರಾಜ್ಯ ಮಟ್ಟದ ಇಲ್ಲವೇ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಸ್ವೀಕರಿಸಬಾರದು.

ಶ್ರೇಷ್ಠ ಕೃಷಿ ಪ್ರಶಸ್ತಿಗಾಗಿ ಕೃಷಿ ಕ್ಷೇತ್ರದಲ್ಲಿ ವಿಶಿಷ್ಠ ಸಾಧನೆಯನ್ನು ಮಾಡಿರಬೇಕು. ಅಭ್ಯರ್ಥಿಗಳು ಮಾಡಿರುವ ಸಾಧನೆಯ ಮೂಲ ಸ್ವರೂಪವಾಗಿದ್ದು, ಬೇರೆಯವರು ಮಾಡಿರುವ ಸಾಧನೆಗಿಂತ ಭಿನ್ನವಾಗಿರಬೇಕು. ರೈತರು ಕೃಷಿ ಹಾಗೂ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಬೇಕು. ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಡಿಸೆಂಬರ್ 15ರೊಳಗಾಗಿ ಸಲ್ಲಿಸಬೇಕು.

ಆಯುಧ ಇಡಲು ಸೂಚನೆ

ಕಲಬುರ್ಗಿ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಡಿಸೆಂಬರ್ 22 ಹಾಗೂ ಡಿಸೆಂಬರ್ 27ರಂದು ಮತದಾನ ನಡೆಯಲಿದೆ. ಈ ಚುನಾವಣೆ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಅನುಕೂಲವಾಗುವಂತೆ ಆಯುಧ (ಫೈರ ಆರ್ಮ್ಸ್‌)ಗಳನ್ನು ಹೊಂದಿರುವವರು ಚುನಾವಣಾ ಪ್ರಕ್ರಿಯೆ ಮುಗಿಯುವರೆಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ತಮ್ಮ ಆಯುಧಗಳನ್ನು ಠೇವಣಿ ಇಡಬೇಕೆಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಆದೇಶ ಹೊರಡಿಸಿದ್ದಾರೆ.

ಭಾರತೀಯ ಆಯುಧ ಕಾಯ್ದೆ-1959ರ ಕಲಂ 24 ಎ(1)ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ. ಯಾವುದೇ ಆಯುಧ ಪರವಾನಗಿದಾರರು ತಮ್ಮ ಆಯುಧಗಳನ್ನು ಸಾರ್ವಜನಿಕ ಸ್ಥಳದಲ್ಲಿ ಹೊತ್ತು ಒಯ್ಯುವುದನ್ನು ಹಾಗೂ ಪ್ರದರ್ಶನ ಮಾಡುವುದನ್ನು ಡಿಸೆಂಬರ್ 31ರವರೆಗೆ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತರಬೇತಿ

ಕಲಬುರ್ಗಿ: ಕೇಂದ್ರ ಸರ್ಕಾರ, ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಆಶ್ರಯದಲ್ಲಿ ಹೊಸ ಉದ್ಯಮ ಸ್ಥಾಪಿಸುವವರಿಗೆ ಕಲಬುರ್ಗಿಯಲ್ಲಿ ಉಚಿತವಾಗಿ 6 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕ ಜಿ.ಯು. ಹುಡೇದ್ ತಿಳಿಸಿದ್ದಾರೆ.

ತರಬೇತಿ ಪಡೆದು ಸ್ವಯಂ ಉದ್ಯೋಗ ಪ್ರಾರಂಭಿಸಲಿಚ್ಛಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ರಿಂದ 45 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನ ಪುರುಷ ಮತ್ತು ಮಹಿಳೆಯರುಗಳು ಹಾಗೂ ಎಲ್ಲಾ ವರ್ಗದ ಮಹಿಳೆಯರು ಕನಿಷ್ಠ ಓದು-ಬರಹ ಬಲ್ಲವರು ಅರ್ಜಿ ಸಲ್ಲಿಸಬಹುದು.

ಡಿಸೆಂಬರ್ 8ರೊಳಗಾಗಿ ಅರ್ಜಿಯನ್ನು ‘ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಸರ್ಕಾರಿ ಬಾಲಕರ ಐಟಿಐ ಆವರಣ, ಎಂ.ಎಸ್.ಕೆ. ಮಿಲ್ ರಸ್ತೆ, ಕಲಬುರ್ಗಿ-585102’ ಈ ವಿಳಾಸಕ್ಕೆ ಸಲ್ಲಿಸಬೇಕು. ಮಾಹಿತಿಗೆ 9108972833, 9916006910 ಹಾಗೂ 9986332736 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT