ಸೋಮವಾರ, ಮೇ 23, 2022
30 °C

‘ಸೈಬರ್ ಸೆಕ್ಯೂರಿಟಿ ಮತ್ತು ಇ– ಆಡಳಿತ’; ಕಾರ್ಯಾಗಾರ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಇ-ಆಡಳಿತ ಕೇಂದ್ರ–ಬೆಂಗಳೂರು ಹಾಗೂ ಜಿಲ್ಲಾ ತರಬೇತಿ ಸಂಸ್ಥೆ ಸಹಯೋಗದೊಂದಿಗೆ ಎನ್.ಇ.ಜಿ.ಡಿ. ಸಾಮರ್ಥ್ಯ ಅಭಿವೃದ್ಧಿ ಯೋಜನೆಯಡಿ ಫೆ. 20ರಂದು ‘ಸೈಬರ್ ಸೆಕ್ಯೂರಿಟಿ ಮತ್ತು ಇ– ಆಡಳಿತ’ ಕುರಿತು ಜಿಲ್ಲೆಯ ಗ್ರೂಪ್ ‘ಎ’ ಅಧಿಕಾರಿಗಳಿಗೆ ಒಂದು ದಿನದ ವಿಶೇಷ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಂಬೋಜಿ ನಾಯ್ಕೋಡಿ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10ಕ್ಕೆ ನಗರದ ಜೇವರ್ಗಿ ರಸ್ತೆಯ ಎನ್‍ಜಿಓ ಕಾಲೊನಿಯಲ್ಲಿರುವ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಏರ್ಪಡಿಸಲಾಗಿರುವ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಉದ್ಘಾಟಿಸುವರು. ಜಿಲ್ಲೆಯ ಎಲ್ಲಾ ಗ್ರೂಪ್ ‘ಎ’ ವರ್ಗದ ಅಧಿಕಾರಿಗಳು ಈ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ಕುಂದುಕೊರತೆ ಸಭೆ ನಾಳೆ

ಕಲಬುರ್ಗಿ: ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಚಿತ್ತಾಪುರ, ಶಹಾಬಾದ ಹಾಗೂ ಕಾಳಗಿ ಉಪವಿಭಾಗಗಳ ಕಚೇರಿಯಲ್ಲಿ ಇದೇ ಫೆಬ್ರವರಿ 20ರಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಇಂಜಿನಿಯರರು ತಿಳಿಸಿದ್ದಾರೆ.

ಜೇವರ್ಗಿ, ಯಡ್ರಾಮಿ, ಚಿತ್ತಾಪುರ, ಶಹಾಬಾದ ಹಾಗೂ ಕಾಳಗಿ ಉಪವಿಭಾಗಗಳ ಶಾಖೆಗಳಲ್ಲಿ ಬರುವ ಗ್ರಾಹಕರು/ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿನ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಗಾಗಿ ಈ ಗ್ರಾಹಕರ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗಿದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಜನಸ್ಪಂದನ ಸಭೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು