ಭಾನುವಾರ, ಮೇ 22, 2022
21 °C

ಸಂಕ್ಷಿಪ್ತ ಸುದ್ದಿ: ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ‘ಸರ್ವರಿಗೂ ಸಂವಿಧಾನ’ ಯೋಜನೆಯಡಿ ರಂಗಾಯಣದಿಂದ ನಾಟಕ ಸಿದ್ಧಪಡಿಸಲು ಕಲಾವಿದರ ಆಯ್ಕೆ ಮಾಡಬೇಕಾಗಿದೆ. ಇದಕ್ಕಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಲಾವಿದರಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಫೆ. 9ರವರೆಗೆ ವಿಸ್ತರಿಸಲಾಗಿದೆ ಎಂದು ರಂಗಾಯಣದ (ಪ್ರಭಾರ) ಆಡಳಿತಾಧಿಕಾರಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಕಲಾವಿದರ ವಯೋಮಿತಿ 18 ರಿಂದ 40 ವರ್ಷ. ಈ ಕಲಾವಿದರನ್ನು ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ 3 ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.  www.rangayanakalaburagi.com ವೆಬ್‍ಸೈಟ್‍ದಿಂದ ಅರ್ಜಿ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿ, ‘ಆಡಳಿತಾಧಿಕಾರಿಗಳು, ರಂಗಾಯಣ, ಸುವರ್ಣ ಸಾಂಸ್ಕೃತಿಕ ಸಮುಚ್ಚಯ, ಸೇಡಂ ಶಹಾಬಾದ್‌ ವರ್ತುಲ ರಸ್ತೆ, ಕಲಬುರ್ಗಿ-585105’ ಈ ವಿಳಾಸಕ್ಕೆ ಕಳುಹಿಸಬೇಕು. ಮಾಹಿತಿಗೆ 08472-227735ಗೆ ಸಂಪರ್ಕಿಸಲು ಕೋರಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.