ಸೇಡಂ: ಪಟ್ಟಣದ ಬಸ್ ನಿಲ್ದಾಣದ ಬಳಿವಿರುವ ಬಿಎಸ್ಸಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ನೂತನ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸರ್ಕಾರ ₹10 ಕೋಟಿ ಅನುದಾನ ನೀಡಿದೆ.

ಸೇಡಂನಲ್ಲಿ 2024ರಲ್ಲಿಯೇ ಕಾಲೇಜು ಪ್ರಾರಂಭಗೊಂಡರೂ ಸ್ವಂತ ಕಟ್ಟಡ ಕೊರತೆ ಕಾಡುತ್ತಿತ್ತು. ಕಾಲೇಜು ಪ್ರಾರಂಭಗೊಂಡಾಗ ಸಚಿವ ಡಾ.ಶರಣಪ್ರಕಾಶ ಪಾಟೀಲ ನೂತನ ಕಟ್ಟಡ ನಿರ್ಮಾಣದ ಭರವಸೆ ನೀಡಿದ್ದರು. ಅದರಂತೆ ಈಗ ಸರ್ಕಾರದಿಂದ ₹10 ಕೋಟಿ ಅನುದಾನ ಮಂಜೂರು ಮಾಡಿಸಿದ್ದು, ವಿದ್ಯಾರ್ಥಿಗಳಲ್ಲಿ ಸಂತಸ ಮನೆ ಮಾಡಿದೆ.

‘ಕಾಲೇಜು ಮೂರು ಅಂತಸ್ತಿನ ಕಟ್ಟಡವಾಗಿರಲಿದ್ದು, ಪ್ರಾಚಾರ್ಯ, ಉಪಪ್ರಾಚಾರ್ಯ, ಶೌಚಾಲಯ, ಸಭಾಂಗಣ, ಮುಖ್ಯಸ್ಥರ ಕೋಣೆಗಳು, ವಿದ್ಯುತ್ ಕೋಣೆ, ಕಚೇರಿ, ಲ್ಯಾಬರೋಟರಿ, ತರಗತಿ ಕೋಣೆಗಳು ಹೀಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಎಂಜಿನಿಯರ್ ಕರಬಸಪ್ಪ ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

‘ಕಾಲೇಜಿನಲ್ಲಿ ಬಿಎಸ್ಸಿ ಪ್ರಥಮ ಬ್ಯಾಚ್ನಲ್ಲಿ 40 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಈಗ ಕಾಲೇಜು ಮತ್ತು ವಸತಿ ನಿಲಯ ಕಾಯಂ ನಿರ್ಮಾಣಗೊಂಡರೆ ಅನುಕೂಲವಾಗಲಿದೆ’ ಎಂದು ಬಿಎಸ್ಸಿ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯೆ ಪ್ರಶೀಲಾ ತಿಳಿಸಿದರು.

‘ಪ್ಯಾರಾಮೆಡಿಕಲ್ನಲ್ಲಿ 45 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಸಧ್ಯ ವಿದ್ಯಾರ್ಥಿಗಳ ತರಗತಿಗಳು ಸರ್ಕಾರಿ ಆಸ್ಪತ್ರೆಯಲ್ಲಿಯೇ ನಡೆಯುತ್ತಿದೆ. ಕಟ್ಟಡ ನಿರ್ಮಾಣವಾದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎನ್ನುತ್ತಾರೆ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಡಾ.ನಾಗರಾಜ ಮನ್ನೆ.

ಕಾಲೇಜು ಪ್ರಾರಂಭವಾದಾಗ ನೂತನ ಕಾಲೇಜಿನ ಕಟ್ಟಡ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದೆ. ಈಗ ಸರ್ಕಾರ ಅನುದಾನ ನೀಡಿದ್ದು ಮುಂದಿನ ದಿನಗಳಲ್ಲಿ ನೂತನ ಕಟ್ಟಡ ನಿರ್ಮಾಣಗೊಳ್ಳಲಿದೆ
ಡಾ.ಶರಣಪ್ರಕಾಶ ಪಾಟೀಲ ವೈದ್ಯಕೀಯ ಶಿಕ್ಷಣ ಸಚಿವ

ವಸತಿನಿಲಯ ಪ್ರತ್ಯೇಕ

₹10 ಕೋಟಿ! ಬಿಎಸ್ಸಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ವಸತಿನಿಲಯ ನಿರ್ಮಾಣಕ್ಕೆ ಪ್ರತ್ಯೇಕ ₹10 ಕೋಟಿ ಅನುದಾನ ಮಂಜೂರಾಗಿದ್ದು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣವಾಗಲಿದೆ. ನೆಲಮಹಡಿಯಲ್ಲಿ ನಿಲಯ ಪಾಲಕರ ಕೋಣೆ ಊಟದ ಸಭಾಂಗಣ ಸೇರಿದಂತೆ ಸಂಗ್ರಹ ಕೋಣೆಗಳಿರಲಿವೆ. ಜೊತೆಗೆ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಳಿದುಕೊಳ್ಳುವ ಸಾಮರ್ಥ್ಯ ಹೊಂದಿರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.