ಶುಕ್ರವಾರ, ನವೆಂಬರ್ 15, 2019
23 °C

ಯಡಿಯೂರಪ್ಪರಿಂದ ಹಣದ ಆಮಿಷ: 28ಕ್ಕೆ ವಿಚಾರಣೆ ಮುಂದೂಡಿಕೆ

Published:
Updated:
prajavani

ಕಲಬುರ್ಗಿ: ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಅಪರೇಷನ್ ಕಮಲ ಆಡಿಯೊ ಪ್ರಕರಣದ ವಿಚಾರಣೆಯನ್ನು ಕಲಬುರ್ಗಿ ಹೈಕೋರ್ಟ್‌ ಇದೇ 28ಕ್ಕೆ ಮುಂದೂಡಿದೆ.

ದೇವದುರ್ಗ ಪ್ರವಾಸಿಮಂದಿರದಲ್ಲಿ ಆಪರೇಶನ್‌ ಕಮಲದ ಭಾಗವಾಗಿ ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಅವರಿಗೆ ಬಿಜೆಪಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕರೆ ಮಾಡಿದ್ದ ಯಡಿಯೂರಪ್ಪ ಅವರು ‍ಪಕ್ಷಕ್ಕೆ ಬಂದರೆ ₹ 10 ಕೋಟಿ ಹಣ ನೀಡುವುದಾಗಿ ದೂರವಾಣಿ ಕರೆ ಮಾಡಿ ತಿಳಿಸಿದ್ದರು ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆ ತೆರವಿಗೆ ಆಗ್ರಹಿಸಿ ಶರಣಗೌಡ ಅವರು ಮನವಿ ಸಲ್ಲಿಸಿದ್ದಾರೆ. ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಹ್ಮದ್‌ ನವಾಜ್‌ ಅವರಿದ್ದ ಏಕಸದಸ್ಯ ಪೀಠವು ಪ್ರಕರಣದ ವಿಚಾರಣೆಯನ್ನು ಮುಂದೂಡಿತು. 

ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್‌ ಹಾಜರಾಗಿದ್ದರು.

ಪ್ರತಿಕ್ರಿಯಿಸಿ (+)