ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ಬಜೆಟ್ ಕಲ್ಯಾಣದ ಪ್ರಗತಿಗೆ ಬರೆದ ಮುನ್ನುಡಿಯಾಗಿದೆ. ಕೆಕೆಆರ್‌ಡಿಬಿಗೆ ₹ 5 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ಕಲಬುರಗಿ ಜಿಲ್ಲೆಗೆ ಟ್ರಾಮಾ ಕೇರ್ ಸೆಂಟರ್, ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮೂಲಕ ಆರೋಗ್ಯ ಸೇವೆ ದೊರೆತಿದೆ. ಕಲ್ಯಾಣದ ಜಿಲ್ಲೆಗಳಲ್ಲಿ ಸಮುದಾಯ ಶೌಚಗೃಹಗಳಿಗೆ 100 ಕೋಟಿ, ತಾಲ್ಲೂಕುಗಳ ಪ್ರಗತಿಗೆ ₹ 3 ಸಾವಿರ ಕೋಟಿ ಮೀಸಲಿಡಲಾಗಿದೆ. ಕಲಬುರಗಿ ಕೋಟೆ, ಮಳಖೇಡ, ಸನ್ನತಿ, ಬಹಮನಿ ಕೋಟೆ, ಇಲ್ಲಿನ ಮ್ಯೂಸಿಯಂಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಯುಕೆಪಿ 3ನೇ ಹಂತದ ಯೋಜನೆಯ ಭೂಸ್ವಾಧೀನ ಹಾಗೂ ಪುನರ್‌ವಸತಿಗೂ ಹಣ ನೀಡಲಾಗಿದೆ.
ಅಲ್ಲಮಪ್ರಭು ಪಾಟೀಲ, ಕಲಬುರಗಿ ದಕ್ಷಿಣ ಶಾಸಕ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.