ಸೋಮವಾರ, ನವೆಂಬರ್ 30, 2020
20 °C

ಸರಗಳ್ಳನ ಬಂಧನ; ₹1 ಲಕ್ಷ ಮೌಲ್ಯದ ಆಭರಣ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆಳಂದ: ತಾಲ್ಲೂಕಿನ ನರೋಣಾ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಚಿನ್ನದ ಆಭರಣಗಳನ್ನು ದೋಚುತ್ತಿದ್ದ ಸರಗಳ್ಳನನ್ನು ಮಂಗಳವಾರ ಬಂಧಿಸಿದ ಪೊಲೀಸರು ₹ 1 ಲಕ್ಷ ಮೌಲ್ಯದ ಚಿನ್ನದ ಆಭರಣಗಳನ್ನು ಜಪ್ತಿ ಮಾಡಿದ್ದಾರೆ.

ಕಡಗಂಚಿ ಗ್ರಾಮದ ನಾಗೇಶ ದತ್ತು ಆಲೂರೆ ಬಂಧಿತ ಆರೋಪಿ. ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ಬಾಗಿಲು ಬೀಗ ಮುರಿದು, ದೇವಿಯ ಮೂರ್ತಿಗೆ ಹಾಕಿದ ₹ 50 ಸಾವಿರ ಮೌಲ್ಯದ ಚಿನ್ನದ ಗುಂಡಿನ ಸರ ಹಾಗೂ ₹ 50 ಸಾವಿರ ಮೌಲ್ಯದ ಪತ್ತಿನ ಸರ ದೋಚಿ ಪರಾರಿಯಾಗಿದ್ದನು.

ಪಿಎಸ್ಐ ಉದ್ದಂಡಪ್ಪ ನೇತೃತ್ವದಲ್ಲಿ ಸಿಬ್ಬಂದಿ ಮಂಗಳವಾರ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು