ಶುಕ್ರವಾರ, ನವೆಂಬರ್ 22, 2019
27 °C

ಬಸ್‌ ಚಾಲಕನಿಗೆ ಜೈಲು ಶಿಕ್ಷೆ

Published:
Updated:

ಕಲಬುರ್ಗಿ: ಇಲ್ಲಿನ ರಾಮಮಂದಿರದ ಬಳಿ ಬೈಕ್‌ ಸವಾರನಿಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣನಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ಡಿಪೊದ ಚಾಲಕ ರಂಗು ಕಸಬಾಗೆ ಇಲ್ಲಿನ 1ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸೂರ್ಯಪ್ರಭಾ ಎಚ್‌.ಡಿ. 1 ವರ್ಷ 3 ತಿಂಗಳು ಸಾದಾ ಜೈಲು ಶಿಕ್ಷೆ ಹಾಗೂ ₹ 4 ಸಾವಿರ ದಂಡ ವಿಧಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ.

ಕಳೆದ ಏಪ್ರಿಲ್‌ 30ರಂದು ಕಲಬುರ್ಗಿಯಿಂದ ರಂಗು ಸಂಸ್ಥೆಯ ಬಸ್‌ ಚಲಾಯಿಸಿಕೊಂಡು ವಿಜಯಪುರದತ್ತ ಹೊರಡುತ್ತಿದ್ದಾಗ ಬೈಕ್‌ ಸವಾರ ರುಕ್ಮಣಪ್ಪ ಅವರಿಗೆ ಡಿಕ್ಕಿ ಹೊಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ರುಕ್ಮಣಪ್ಪ ಸ್ಥಳದಲ್ಲಿಯೇ ಸಾವಿಗೀಡಾಗಿದ್ದರು. ಸಂಚಾರ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಶಾಂತಿನಾಥ ಬಿ.ಪಿ. ಅವರು ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಪ್ರಭಾರ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಶ್ರೀ ವಾದ ಮಂಡಿಸಿದ್ದರು.

ಪ್ರತಿಕ್ರಿಯಿಸಿ (+)