ಚಿತ್ತಾಪುರ (ಕಲಬುರಗಿ ಜಿಲ್ಲೆ): ಇಲ್ಲಿಂದ ಮಳಖೇಡಕ್ಕೆ ಸಂಪರ್ಕ ಜೋಡಿಸುವ ಮುಖ್ಯ ಹೆದ್ದಾರಿಯಲ್ಲಿ ಲಾರಿ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಲಾರಿ ಚಾಲಕ ಸೇರಿದಂತೆ ಒಟ್ಟು 11 ಜನರು ಸೋಮವಾರ ಗಾಯಗೊಂಡಿದ್ದಾರೆ.

ಪಟ್ಟಣದಿಂದ ಮೂರು ಕಿ.ಮೀ. ದೂರದಲ್ಲಿರುವ ಬಡೇಘರ್ ಪೆಟ್ರೋಲ್ ಪಂಪ್ ಮುಂದೆ ಹೆದ್ದಾರಿಯಲ್ಲಿ ಸೇಡಂನಿಂದ ಬರುತ್ತಿದ್ದ ಬಸ್ ಹಾಗೂ ಚಿತ್ತಾಪುರದಿಂದ ಮಳಖೇಡ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಸಂಭವಿಸಿದ ಡಿಕ್ಕಿ ಘಟನೆಯಲ್ಲಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯವಾಗಿದೆ.

ನಾಲ್ವರನ್ನು ಆಂಬುಲೆನ್ಸ್ ಮೂಲಕ ಕಲಬುರ್ಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.ಉಳಿದ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವರಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಅಪಘಾತ ಘಟನೆಗೆ ಬಸ್ ಮತ್ತು ಲಾರಿ ಚಾಲಕರ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳದಲ್ಲಿದ್ದ ಜನರು ಮಾಹಿತಿ ನೀಡಿದರು. ಘಟನೆಯ ಸುದ್ಧಿ ತಿಳಿಯುತ್ತಿದ್ದಂತೆ ಚಿತ್ತಾಪುರ ಪೊಲೀಸ್ ಠಾಣೆಯ ಸಿಪಿಐ ಕೃಷ್ಣಪ್ಪ ಕಲ್ಲದೇವರ, ಪಿಎಸ್ಐ ಗಂಗಮ್ಮ, ಸಿಬ್ಬಂದಿ ನಾಗೇಂದ್ರ ತಳವಾರ ಅವರು ದೌಡಾಯಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.