ಚಿತ್ತಾಪುರ: ‘ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಸಂಪೂರ್ಣ ಹದಗೆಟ್ಟಿದೆ. ಜನರಿಗೆ ಕೊಟ್ಟಿರುವ ಭರವಸೆಗಳು ಈಡೇರಿಲ್ಲ. ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಶಾಸಕರೇ ಸಿಡಿದೆದ್ದು ದಂಗೆ ಏಳುವ ವಾತಾವರಣ ನಿರ್ಮಾಣವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಚಿತ್ತಾಪುರ ಮತಕ್ಷೇತ್ರ ವ್ಯಾಪ್ತಿಯ ಮಾಲಗತ್ತಿ ಗ್ರಾಮದ ಹಿರೋಡೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನ–2026ರ ಎರಡು ದಿನದ ಪ್ರಶಿಕ್ಷಣ ವರ್ಗ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರನ್ನು ಆಮೆರಿಕ ಅಧ್ಯಕ್ಷ ಟ್ರಂಪ್ ಅವರ ಗುಲಾಮ ಎಂದು ಟೀಕಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಜೆಪಿ ಮಂಡಲ ಅಧ್ಯಕ್ಷ ರವೀಂದ್ರ ಖಂಡಿಸಿ ಸ್ವತಃ ಖರ್ಗೆ ಅವರು ಸೋನಿಯಾ ಗಾಂಧಿಯವರ ಅಡಿಯಾಳು ಎಂದು ಪ್ರತ್ಯುತ್ತರ ನೀಡಿರುವುದರಲ್ಲಿ ನಿಜಾಂಶವಿದೆ ಎಂದರು.

ಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿಯ ಕಮಲದ ಹೂವು ಅರಳಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿಟ್ಟ ಹೆಜ್ಜೆ ಹಿಂದಕ್ಕೆ ತೆಗೆಯುವ ಪ್ರಶ್ನೆಯೇ ಇಲ್ಲ. ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಬಾವುಟ ಹಾರಾಡಲಿದೆ’ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ಮಾತಿನಂತೆ ಉದ್ದೇಶ ದೊಡ್ಡದಿರಬೇಕೇ ಹೊರತು ಹುದ್ದೆಯಲ್ಲ. ಅವರ ವಿಚಾರಧಾರೆಯಂತೆ ಬಿಜೆಪಿ ಕಾರ್ಯಕರ್ತರು ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸೌಲಭ್ಯ ಸಿಗಬೇಕು ಎಂಬುದೇ ಬಿಜೆಪಿಯ ಧ್ಯೇಯ’ ಎಂದರು.

ಜಗತ್ತಿನ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಶಾಮಪ್ರಸಾದ್ ಮುಖರ್ಜಿ, ಪಂಡಿತ್ ದೀನದಯಾಳ್ ಉಪಾಧ್ಯಾಯ, ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ, ಬಿ.ಎಸ್. ಯಡಿಯೂರಪ್ಪ, ಅನಂತಕುಮಾರ್, ಡಿ.ಎಚ್. ಶಂಕರಮೂರ್ತಿ, ವಿ.ಎಸ್. ಆಚಾರ್ಯ, ಎಂ.ಆರ್. ತಂಗಾ, ಬಸವರಾಜ ಪಾಟೀಲ ಸೇಡಂ ಸೇರಿದಂತೆ ರಾಷ್ಟ್ರ ಮತ್ತು ರಾಜ್ಯದ ಹಿರಿಯರ ತಪಸ್ಸು, ಜೀವನ ತ್ಯಾಗ, ಹೋರಾಟದಿಂದ ಪಕ್ಷ ಬಲಿಷ್ಠವಾಗಿದೆ’ ಎಂದರು.

ಮಾಜಿ ಸಂಸದ ಉಮೇಶ ಜಾಧವ, ಶಾಸಕ ಬಸವರಾಜ ಮತ್ತಿಮಡು, ಬಿ.ಜಿ. ಪಾಟೀಲ, ಶಶೀಲ್ ನಮೋಶಿ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ, ರಾಜಕುಮಾರ ಪಾಟೀಲ ತೇಲ್ಕೂರ, ಅಮರನಾಥ ಪಾಟೀಲ, ಬಾಬುರಾವ್ ಚವ್ಹಾಣ, ಮುಖಂಡರಾದ ಶಿವರಾಜ ಪಾಟೀಲ ರದ್ದೇವಾಡಗಿ, ಅವ್ವಣ್ಣ ಮ್ಯಾಕೇರಿ, ಶರಣಪ್ಪ ತಳವಾರ, ನಿತಿನ್ ಗುತ್ತೇದಾರ್, ಶಶಿಕಲಾ ಟೆಂಗಳಿ, ಶೋಭಾ ಬಾಣಿ, ಬಸವರಾಜ ಬೆಣ್ಣೂರಕರ್, ಧರ್ಮಣ್ಣ ಇಟಗಾ, ಚಂದು ಪಾಟೀಲ, ರಾಜಶೇಖರ ನಾಗಮೂರ್ತಿ, ಹರ್ಷಾನಂದ ಗುತ್ತೇದಾರ, ಚಂದಮ್ಮ ಪಾಟೀಲ, ಲಿಂಗಾರೆಡ್ಡಿ ಬಾಸರೆಡ್ಡಿ, ಬಸವರಾಜ ಶಿವಗೋಳ, ಚಂದ್ರಶೇಖರರೆಡ್ಡಿ ನಾಲವಾರ, ಸೋಮಶೇಖರ ಪಾಟೀಲ ಬೆಳಗುಂಪಾ, ಚಂದ್ರಶೇಖರ ಅವಂಟಿ, ಶಿವಲಿಂಗಪ್ಪ ವಾಡೇದ, ಮಲ್ಲಿನಾಥ ಇಂದೂರ, ಶಶಿಕಾಂತ ಪಾಟೀಲ, ಶಂಕರ ಚವಾಣ್ ಇದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನಾಗರಾಜ ಹೂಗಾರ ನಿರೂಪಿಸಿದರು.

ಚಿತ್ತಾಪುರಕ್ಕೆ ಸಮರ್ಥ ನಾಯಕತ್ವ

ಚಿತ್ತಾಪುರ: ‘ಬಿಜೆಪಿಗೆ ಕಾರ್ಯಕರ್ತರೇ ಶಕ್ತಿ ಮತ್ತು ಆಧಾರ. ಚಿತ್ತಾಪುರ ಕ್ಷೇತ್ರದ ಕಡೆಗೆ ರಾಜ್ಯದ ಗಮನ ಕಡಿಮೆಯಾಗಿದ್ದರ ಪರಿಣಾಮ ಪಕ್ಷಕ್ಕೆ ಸ್ವಲ್ಪ ಹಿನ್ನಡೆಯಾಗಿದೆ. ಮುಂದಿನ ಜಿ.ಪಂ ತಾ.ಪಂ ಚುನಾವಣೆಗೆ ಇಂದಿನಿಂದಲೇ ಸಿದ್ಧತೆ ಆರಂಭವಾಗಲಿದೆ. 15 ದಿನಗಳಲ್ಲಿ ಚಿತ್ತಾಪುರಕ್ಕೆ ನಾಯಕತ್ವ ಕೊಡುವ ಕೆಲಸ ಮಾಡುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಹೇಳಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಣಿಕಂಠ ರಾಠೋಡ ಈಗ ಕ್ಷೇತ್ರದಿಂದ ದೂರ ಉಳಿದಿದ್ದಾರೆ. ಯಾರ ನಾಯಕತ್ವ ಯಾರು ಅಭ್ಯರ್ಥಿ ಎಂಬ ಗೊಂದಲ ಬಿಜೆಪಿ ಕಾರ್ಯಕರ್ತರಲ್ಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಕ್ಷೇತ್ರದ ಮುಂದಿನ ಅಭ್ಯರ್ಥಿ ಯಾರನ್ನು ಮಾಡಬೇಕು ಯಾವಾಗ ಮಾಡಬೇಕು ಎಂಬುದು ಸಮಯ ಸಂದರ್ಭಕ್ಕೆ ಅನುಸಾರ ಪಕ್ಷ ತೀರ್ಮಾನ ಮಾಡಲಿದೆ. ಮತದಾರರು ಬದಲಾವಣೆ ಬಯಸುತ್ತಿದ್ದಾರೆ. ಅಭ್ಯರ್ಥಿ ಯಾರೇ ಆಗಲಿ ಬಿಜೆಪಿ ಗೆಲ್ಲಬೇಕು ಎಂಬುದೇ ನಮಗೆ ಮುಖ್ಯ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.