ಕಲಬುರಗಿ: ಪ್ರಾದೇಶಿಕ ಅಸಮಾನತೆ ಕುರಿತು ಡಿ.ಎಂ. ನಂಜುಂಡಪ್ಪ ಅವರ ವರದಿಗಿಂತಲೂ ಇತ್ತೀಚೆಗೆ ಸಲ್ಲಿಸಿದ ಪ್ರೊ.ಗೋವಿಂದರಾವ್ ವರದಿಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಿದೆ ಎಂದು ತಿಳಿಸಿದೆ. 50 ವರ್ಷ ಈ ಭಾಗವನ್ನು ಪ್ರತಿನಿಧಿಸಿರುವ ಖರ್ಗೆ ಕುಟುಂಬ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟರು.

ಶುಕ್ರವಾರ ನಗರಕ್ಕೆ ಬಂದಿದ್ದ ವೇಳೆ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಂಜುಂಡಪ್ಪ ವರದಿಯಲ್ಲಿ ಶೇ 60ರಷ್ಟು ಅಸಮಾನತೆ ಇದೆ ಎಂದಿದ್ದರು. ಇದೀಗ ಶೇ 72ರಷ್ಟು ಇದೆ ಎಂಬುದನ್ನು ಪ್ರೊ.ಗೋವಿಂದರಾವ್ ಸಮಿತಿಯ ವರದಿ ತಿಳಿಸಿದೆ. ಹಾಗಾದರೆ, ಏನು ಅಭಿವೃದ್ಧಿಯಾಗಿದೆ? ಖರ್ಗೆ ಕುಟುಂಬದವರು ಇದೇ ಅಭಿವೃದ್ಧಿ ಮಾಡಿದ್ದಾರೆಯೇ’ ಎಂದು ವ್ಯಂಗ್ಯವಾಡಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತೆತ್ತಿದರೆ ಅಂತರರಾಷ್ಟ್ರೀಯ ಹಾಗೂ ರಾಷ್ಟ್ರೀಯ ವಿಷಯಗಳ ಬಗ್ಗೆ ಮಾತನಾಡುತ್ತಾರೆ. ತಮ್ಮ ಜಿಲ್ಲೆಯ ಅಭಿವೃದ್ಧಿ ಬಗ್ಗೆಯೂ ಗಮನ ನೀಡಿ ಮಾತನಾಡಬೇಕಿದೆ. ಒಂದು ಕುಟುಂಬದ ನಿರಂತರ ಆಡಳಿತ ಇದ್ದರೂ ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ. ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ಜಿಲ್ಲೆ ಹಾಗೂ ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕೆಲಸಗಳು ಹಾಗೂ ನಿಮ್ಮ ಅಭಿವೃದ್ಧಿ ಕೆಲಸಗಳ ಕುರಿತು ಬಹಿರಂಗ ಚರ್ಚೆಗೆ ಸಿದ್ಧರಾಗಿದ್ದೇನೆ’ ಎಂದು ಪ್ರಿಯಾಂಕ್ ಅವರಿಗೆ ಸವಾಲು ಹಾಕಿದರು.

ಶಾಸಕ ಬಸವರಾಜ ಮತ್ತಿಮಡು, ವಿಧಾನಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಮಾಜಿ ಸಂಸದ ಡಾ.ಉಮೇಶ ಜಾಧವ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಅವ್ವಣ್ಣ ಮ್ಯಾಕೇರಿ, ಸಂತೋಷ ಹಾದಿಮನಿ, ಹರ್ಷಾನಂದ ಗುತ್ತೇದಾರ, ಅರುಣಕುಮಾರ ಪಾಟೀಲ ಕೊಡಲಹಂಗರಗಾ, ಜಿಲ್ಲಾ ಮಹಿಳಾ ಬಿಜೆಪಿ ಅಧ್ಯಕ್ಷೆ ಗೌರಿ ಚಿಚಕೋಟಿ ಇತರರಿದ್ದರು.

ರಾಜ್ಯ ಸರ್ಕಾರವು ಸಕಾಲಕ್ಕೆ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸದೇ ಇರುವುದರಿಂದ ಕೇಂದ್ರದಿಂದ ಬರಬೇಕಾದ ಸುಮಾರು ₹15 ಸಾವಿರ ಕೋಟಿ ಅನುದಾನ ಬಂದಿಲ್ಲ. ಇದಕ್ಕೆ ಸರ್ಕಾರದ ವಿಳಂಬ ಧೋರಣೆಯೇ ಕಾರಣ
ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.