ಗುರುವಾರ , ಫೆಬ್ರವರಿ 25, 2021
28 °C

ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೋ ಅವರ ಪರ ಕೆಲಸ ಮಾಡುವೆ: ವಿಜಯೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಬಸವ ಕಲ್ಯಾಣ ಉಪಚುನಾವಣೆಯಲ್ಲಿ ಪಕ್ಷ ಯಾರಿಗೆ ಟಿಕೆಟ್ ‌ಕೊಡುತ್ತದೋ ಅವರ ಪರ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ‌ಬಿ.ವೈ.ವಿಜಯೇಂದ್ರ ತಿಳಿಸಿದರು.

ನಗರದಲ್ಲಿ ಶುಕ್ರವಾರ ಆರಂಭವಾದ ಶಿವಾಚಾರ್ಯರ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರು ಯಡಿಯೂರಪ್ಪ ಅವರ ಮೇಲಿನ ಪ್ರೀತಿಯಿಂದ ನನಗೆ ಟಿಕೆಟ್ ‌ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಅವರ ಪ್ರೀತಿಗೆ ಋಣಿಯಾಗಿದ್ದೇನೆ’ ಎಂದರು.

ತಾವು ನಿಲ್ಲುತ್ತೇನೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಲಿಲ್ಲ.

ಖಾತೆ ಹಂಚಿಕೆಯಾದಾಗ ಅಸಮಾಧಾನ ಸಹಜ. ಮುಖ್ಯಮಂತ್ರಿ ಅವರು ‌ಅಸಮಾಧಾನಗೊಂಡ ಸಚಿವರೊಂದಿಗೆ ಮಾತನಾಡಿ ಸಮಾಧಾನ ಮಾಡಲಿದ್ದಾರೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು