ಕಲಬುರ್ಗಿ: ಮೂರು ದಿನಗಳ ಹಿಂದೆ ನಗರದ ಎಂ.ಬಿ. ನಗರದ ಮನೆಯೊಂದರಲ್ಲಿ ಐಪಿಎಲ್ ಕ್ರಿಕೆಟ್ ಟೂರ್ನಿಯ ಬೆಟ್ಟಿಂಗ್ ನಡೆಯುತ್ತಿದ್ದ ವೇಳೆ ಇಬ್ಬರನ್ನು ವಶಕ್ಕೆ ಪಡೆದಿರುವ ಸೊಲ್ಲಾಪುರದ ಸಿಸಿಬಿ ಪೊಲೀಸರು ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅವರ ಪತ್ನಿ ಜಯಶ್ರೀ ಮತ್ತಿಮೂಡ ಹೆಸರಿನಲ್ಲಿರುವ ಇನ್ನೋವಾ ಕ್ರಿಸ್ಟಾ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಅತುಲ್ ಸಿರಶೆಟ್ಟಿ, ಪ್ರದೀಪ್ ಮಲ್ಲಯ್ಯ ಕಾರಂಜೆ ಎಂಬುವರಿಂದ ₹ 38.44 ಲಕ್ಷ ನಗದು, ನಾಲ್ಕು ಲ್ಯಾಪ್ಟಾಪ್ಗಳು, ಟಿ.ವಿ. ವಶಕ್ಕೆ ಪಡೆದಿರುವ ಮಹಾರಾಷ್ಟ್ರದ ಸೊಲ್ಲಾಪುರದ ಸಿಸಿಬಿ ಪೊಲೀಸರು ಎರಡು ಕಾರು ಹಾಗೂ ಒಂದು ಸ್ಕೂಟರ್ ಜಪ್ತಿ ಮಾಡಿದ್ದಾರೆ.

ಆ ಪೈಕಿ ಕೆಎ 51, ಎಂ.ಪಿ. 9955 ನೋಂದಣಿಯ ಕಾರು ಶಾಸಕರ ಪತ್ನಿಯ ಹೆಸರಿನಲ್ಲಿದೆ.

ಬೆಟ್ಟಿಂಗ್ನಲ್ಲಿ ಇನ್ನೂ ಹಲವು ಜನರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರಕ್ಕೆ ಬಂದಿದ್ದ ಮಹಾರಾಷ್ಟ್ರ ಪೊಲೀಸರು ಕಲಬುರ್ಗಿ ಪೊಲೀಸರ ಗಮನಕ್ಕೂ ಬಾರದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೊಲ್ಲಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.