ಗುರುವಾರ , ಏಪ್ರಿಲ್ 15, 2021
30 °C

ಜವಳಿ ಪಾರ್ಕ್‌ ರದ್ದು: ಕೇಂದ್ರ ಸರ್ಕಾರ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ತಾಲ್ಲೂಕಿನ ನಂದೂರ– ಕೆಸರಟಗಿ ಕೈಗಾರಿಕಾ ಪ್ರದೇಶದಲ್ಲಿ‌‌ ಸ್ಥಾಪಿಸಲು ಉದ್ದೇಶಿಸಿದ್ದ ‘ಜವಳಿ ಪಾರ್ಕ್‌’ ಅನ್ನು ಸಾಧನ– ಸಲಕರಣೆಗಳ ಕೊರತೆ ಕಾರಣ ಕೈಬಿಟ್ಟಿರುವುದಾಗಿ ಕೇಂದ್ರ ಸರ್ಕಾರ ಮತ್ತೆ ಸ್ಪಷ್ಟಪಡಿಸಿದೆ.

ಸಂಸದ ಡಾ.ಉಮೇಶ ಜಾಧವ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾಣಿ ಅವರು, ‘ಜವಳಿ ಪಾರ್ಕ್‌ ಸ್ಥಾಪನೆಗೆ ಎಸ್‌ಪಿವಿ ಸದಸ್ಯರು ವಂತಿಗೆ ಪಾವತಿಸಲು ನಿರಾಸಕ್ತಿ ತೋರಿದ್ದಾರೆ. ಪಾರ್ಕ್‌ ಸ್ಥಾಪನೆಗೆ ಬೇಕಾದ ಮೂಲಸೌಕರ್ಯಗಳು ಕೊರತೆ ಕಾರಣ ಇದನ್ನು ಕೈಬಿಡಲಾಗಿದೆ’ ಎಂದು ತಿಳಿಸಿದ್ದಾರೆ.

ಜವಳಿ ಪಾರ್ಕ್‌ ಸ್ಥಾಪನೆ ಉದ್ದೇಶ ಕೈ ಬಿಟ್ಟಾಗ 2020ರ ಫೆ. 11ರಂದು ‘ಪ್ರಜಾವಾಣಿ’ ವಿಸ್ತೃತ ವರದಿ ಪ್ರಕಟಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು