ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಯುಕೆ: ಕುಲಪತಿ ಹುದ್ದೆಗೆ ಐವರ ಹೆಸರು ಶಿಫಾರಸು

Last Updated 13 ಅಕ್ಟೋಬರ್ 2020, 16:52 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಶೋಧನಾ ಸಮಿತಿಯು ಐವರ ಹೆಸರನ್ನು ಮಾನವ ಸಂಪನ್ಮೂಲ ಸಚಿವಾಲಯಕ್ಕೆ ಶಿಫಾರಸು ಮಾಡಿದೆ.‌

ಹೈದರಾಬಾದ್‌ನ ಓಸ್ಮಾನಿಯಾ ವಿಶ್ವವಿದ್ಯಾಲಯದ ಬಿ.ಸತ್ಯನಾರಾಯಣ, ಹೈದರಾಬಾದ್‌ನ ಕೇಂದ್ರೀಯ ವಿಶ್ವವಿದ್ಯಾಲಯದ ಡಾ.ಮೀನಾ ಹರಿಹರನ್, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಲಬುರ್ಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಬಸವರಾಜ ಗಾದಗೆ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪುಷ್ಮಾ ಸವದತ್ತಿ, ಮೈಸೂರು ವಿಶ್ವವಿದ್ಯಾಲಯದ ನಿರಂಜನ ವಾನಳ್ಳಿ ಅವರ ಹೆಸರನ್ನು ಸಮಿತಿ ಶಿಫಾರಸು
ಮಾಡಿದೆ.

ಮೂವರ ಮಧ್ಯೆ ಪೈಪೋಟಿ: ನಿರಂಜನ ವಾನಳ್ಳಿ, ಡಾ.ಮೀನಾ ಹರಿಹರನ್, ಸತ್ಯನಾರಾಯಣ ಅವರು ತಮ್ಮ ಪ್ರಭಾವ ಬಳಸಿಕೊಂಡು ಕುಲಪತಿ ಹುದ್ದೆಗೆ ಲಾಬಿ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪುಷ್ಪಾ ಸವದತ್ತಿ ಅವರ ಹೆಸರು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಶಿಫಾರಸುಗೊಂಡಿರುವ ಪಟ್ಟಿಯಲ್ಲಿಯೂ ಇದೆ.

‘ಬಸವರಾಜ ಗಾದಗೆ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಸ್ಥಳೀಯ ಸಂಸದ ಡಾ.ಉಮೇಶ ಜಾಧವ ಅವರ ಮೂಲಕ ಲಾಬಿ ನಡೆಸಿದ್ದಾರೆ. ನಿರಂಜನ ವಾನಳ್ಳಿ ಅವರು ಸಂಘಪರಿವಾರದ ಮುಖಂಡರೊಂದಿಗೆ ಒಡನಾಟ ಹೊಂದಿದ್ದು, ಅದನ್ನು ಬಳಸಿಒತ್ತಡ ಹೇರುತ್ತಿದ್ದಾರೆ. ಕರ್ನಾಟಕದವರನ್ನು ನೇಮಿಸಬೇಕು ಎಂದಾದರೆ ವಾನಳ್ಳಿ ಅವರ ಹೆಸರು ಮುಂಚೂಣಿಯಲ್ಲಿರಲಿದೆ’ ಎನ್ನುವುದು ಮೂಲಗಳ ವಿವರಣೆ.

ತೆಲಂಗಾಣದ ಸತ್ಯನಾರಾಯಣ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ನಿಕಟವರ್ತಿ ಎನ್ನ ಲಾಗಿದ್ದು, ಅವರನ್ನು ಪರಿಗಣಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT