ಕಲಬುರಗಿ: ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಸಾರ್ವಜನಿಕ ಸಂಪರ್ಕಾಧಿಕಾರಿ/ ಸಹಾಯಕ ಕುಲಸಚಿವ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದ ಆರೋಪಗಳು ಕೇಳಿ ಬಂದಿದೆ.

ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಆಪ್ತ ಸಹಾಯಕ ಶ್ರೀಕಾಂತ್ ಕುಸೂರ ಎಂಬುವವರಿಗೆ ನೇಮಕ ಪತ್ರ ನೀಡಲು ಶುಕ್ರವಾರ ನಡೆದ ವಿ.ವಿ.ಯ ಕಾರ್ಯಕಾರಿ ಸಮಿತಿ (ಇಸಿ) ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ಮಾಹಿತಿ ತಿಳಿಯುತ್ತಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಸಿ ಸದಸ್ಯರಾಗಿರುವ ತಮ್ಮ ಗಮನಕ್ಕೆ ತರದೇ ಈ ನೇಮಕಾತಿ ನಡೆಸಿದ್ದು ಏಕೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಅಲ್ಲದೇ, ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ವಿನೀತ್ ಜೋಶಿ ಅವರಿಗೆ ಪತ್ರ ಬರೆದಿರುವ ಮುಖ್ಯ ಕಾರ್ಯದರ್ಶಿ ಅವರು ತಕ್ಷಣವೇ ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ಕೇಂದ್ರೀಯ ವಿ.ವಿ. ಕುಲಸಚಿವ ಪ್ರೊ.ಆರ್.ಆರ್. ಬಿರಾದಾರ ಅವರಿಗೆ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವ ಶಾಲಿನಿ ರಜನೀಶ್ ಅವರು ಈ ನೇಮಕಾತಿಗೆ ಇಸಿ ಸದಸ್ಯರಾದ ತಮ್ಮ ಅಸಮ್ಮತಿಯನ್ನು ದಾಖಲಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ, ಎಲ್ಲ ಅಭ್ಯರ್ಥಿಗಳ ದಾಖಲೆಗಳನ್ನು ತಮಗೆ ಕಳುಹಿಸುವಂತೆ ತಾಕೀತು ಮಾಡಿದ್ದಾರೆ.

ಕುಲಪತಿ, ತೆಲಂಗಾಣ ಮೂಲದ ಪ್ರೊ.ಬಟ್ಟು ಸತ್ಯನಾರಾಯಣ ಅವರು ಅಧಿಕಾರ ವಹಿಸಿಕೊಂಡ ಬಳಿಕ ಬಹುತೇಕ ನೇಮಕಾತಿಗಳಲ್ಲಿ ಶೈಕ್ಷಣಿಕ ಅರ್ಹತೆಯ ಬದಲು ಸಂಘ ಪರಿವಾರದ ಹಿನ್ನೆಲೆಯವರಿಗೆ ಆದ್ಯತೆ ನೀಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಇದನ್ನು ವಿರೋಧಿಸಿ ವಿ.ವಿ. ಎದುರು ದಲಿತ, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ಇದೀಗ ಪಿಆರ್ ಒ ಹುದ್ದೆ ನೇಮಕಾತಿಯಲ್ಲಿಯೂ ಬಿಜೆಪಿ ಮುಖಂಡ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ಆಪ್ತ ಸಹಾಯಕ ಶ್ರೀಕಾಂತ ಅವರಿಗೆ ವಿ.ವಿ. ಮಣೆ ಹಾಕಿರುವ ಆರೋಪ ಕೇಳಿ ಬಂದಿದೆ.

'ಲಿಖಿತ ಪರೀಕ್ಷೆ, ಸಂದರ್ಶನದಲ್ಲಿ ಶ್ರೀಕಾಂತ ಅವರಿಗಿಂತ ಹೆಚ್ಚು ಅಂಕ ಪಡೆದವರನ್ನು ಕಡೆಗಣಿಸಿ, ಮಾಧ್ಯಮ ಕ್ಷೇತ್ರದಲ್ಲಿ ಅನುಭವ ಇಲ್ಲದಿದ್ದರೂ ಈ ಹುದ್ದೆಗೆ ಪರಿಗಣಿಸಲಾಗಿದೆ. ಪತ್ರಿಕೆಯಲ್ಲಿ ಕೆಲಸ ಮಾಡದಿದ್ದರೂ ದಿನಪತ್ರಿಕೆಯೊಂದರಲ್ಲಿ ಕೆಲಸ ಮಾಡಿದ ಬಗ್ಗೆ ಸುಳ್ಳು ದಾಖಲೆ ಸೃಷ್ಟಿಸಿ ಸಲ್ಲಿಸಿದ್ದಾರೆ' ಎಂದು ಅಭ್ಯರ್ಥಿಗಳು ಕೇಂದ್ರದ ಉನ್ನತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಬರೆದ ಪತ್ರದಲ್ಲಿ ಅಭ್ಯರ್ಥಿಗಳು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.